ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಸದಸ್ಯರು ಬಿಗಿಪಟ್ಟನ್ನು ಮುಂದುವರೆಸಿದ್ದಾರೆ. ವಿಧಾನಸಭೆಯಲ್ಲಿ ಹೋರಾಟವನ್ನು ತೀವ್ರಗೊಳಿಸುವ ಬಗ್ಗೆ ಚರ್ಚಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕರು, ಸಂಸದರಿಗೆ ಭೋಜನಕೂಟವನ್ನು ಆಯೋಜಿಸಿದ್ದಾರೆ.


COMMERCIAL BREAK
SCROLL TO CONTINUE READING

ನಾಳೆ ಮಧ್ಯಾಹ್ನ ವಿಧಾನಸೌಧದಲ್ಲಿ ಭೋಜನ ಕೂಟ(Dinner Party)ವನ್ನು ಆಯೋಜನೆ ಮಾಡಲಾಗಿದೆ. ಎಲ್ಲಾ ಶಾಸಕರು, ಸಂಸದರಿಗೆ ಭೋಜನಕೂಟಕ್ಕೆ ಆಹ್ವಾನ ನೀಡಲಾಗಿದೆ. ವಿಧಾನಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಭೋಜನ ಕೂಟ ಕರೆಯಲಾಗಿದೆ.


HD Kumaraswamy,:'ಕೊರೋನಾ ಲಸಿಕೆ'ಯ ಮೊದಲ ಡೋಸ್ ಪಡೆದ ಹೆಚ್ ಡಿಕೆ


ರಮೇಶ್ ಜಾರಕಿಹೊಳಿ(Ramesh Jarkiholi) ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಸದಸ್ಯರು ಹೋರಾಟವನ್ನು ನಡೆಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರರಕರಣ ದಾಖಲು ಮಾಡಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು. ಕೋರ್ಟ್ ಮೊರೆ ಹೋಗಿರುವ 6 ಸಚಿವರು ರಾಜೀನಾಮೆ ನೀಡಬೇಕು ಎಂಬುದು ಕಾಂಗ್ರೆಸ್ ಬೇಡಿಕೆಯಾಗಿದೆ.


Corona Second Wave: ಜಾತ್ರೆ, ಉತ್ಸವಗಳಿಗೆ ಬೀಳಲಿದೆಯೇ ಬ್ರೇಕ್!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.