ನವದೆಹಲಿ: ಸಿದ್ದರಾಮಯ್ಯ ಲಿಂಗಾಯತ ಸಮಾಜ ಒಡೆಯುವ ಪ್ರಯತ್ನ ಮಾಡಿದ್ದಾರೆ ಎಂದು ಬಿಜೆಪಿಯ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ರಾಜ್ಯ ಸಚಿವ ಸಂಪುಟವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿಯ ಶೋಭಾ ಕರಂದ್ಲಾಜೆ "ಸಿಎಂ‌ ಸಿದ್ದರಾಮಯ್ಯ ಮತದ  ಆಸೆಗಾಗಿ ಲಿಂಗಾಯತ ಸಮಾಜ ಒಡೆಯುವ ಪ್ರಯತ್ನ ಮಾಡಿದ್ದಾರೆ. ಆ ಮೂಲಕ ಹಿಂದೂ ಧರ್ಮದಿಂದ ಲಿಂಗಾಯತ/ವೀರಶೈವರನ್ನು ದೂರ ಇಡಲು ಪ್ರಯತ್ನಿಸುತ್ತಿದ್ದಾರೆ.ಆದ್ದರಿಂದ  ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು" ಎಂದು  ಆಗ್ರಹಿಸಿದರು.


ಇನ್ನು ಮುಂದುವರೆದು ಮಾತನಾಡಿದ ಅವರು ಸಿದ್ದರಾಮಯ್ಯ ಅವರದು ತಲೆ ತಿರುಕ ಸರ್ಕಾರ, ಲಿಂಗಾಯತರು/ವೀರಶೈವರ ಬಗ್ಗೆ ಅಧ್ಯಯನ ಮಾಡದೆ ಸಮಿತಿಯು ಸರ್ಕಾರಕ್ಕೆ ವರದಿ ಕೊಟ್ಟಿದೆ. ಈ ಸಮಿತಿ ಕೊಟ್ಟ ವರದಿಯನ್ನು ಆಧರಿಸಿ ಸಿದ್ದರಾಮಯ್ಯ ಶಿಫಾರಸು ಮಾಡಿದಾರೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.