Hijab Row: ಹಿಜಾಬ್ ಪರ ಸಿದ್ದರಾಮಯ್ಯ ಬ್ಯಾಟಿಂಗ್, ಬಿಜೆಪಿ ಮತ್ತು RSS ವಿರುದ್ಧ ಆಕ್ರೋಶ
ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಯಾವ ಕಾನೂನು ಕೂಡ ಇಲ್ಲ. ಹೀಗಿರುವಾಗ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಉಡುಪಿ (Udupi) ಜಿಲ್ಲೆಯ ಕಾಲೇಜುಗಳಲ್ಲಿ ಹಿಜಾಬ್ (Hijab) ವಿವಾದ ತಾರಕಕ್ಕೇರಿದ್ದು, ಇದು ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗುತ್ತಿದೆ. ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah)ನವರು ಬಿಜೆಪಿ(BJP) ಮತ್ತು RSS ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ’ ಅಂತಾ ಹೇಳುವ ಮೂಲಕ ಹಿಜಾಬ್ ಪರ ಬ್ಯಾಟಿಂಗ್ ಮಾಡಿದ್ದಾರೆ. ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಯಾವ ಕಾನೂನು ಕೂಡಾ ಇಲ್ಲ. ಹೀಗಿರುವಾಗ ಹಿಜಾಬ್ ಧರಿಸಿ(Hijab Row) ಬಂದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ’ ಅಂತಾ ಹೇಳಿದ್ದಾರೆ.
"ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು"
‘ಕುಂದಾಪುರದ ಸರ್ಕಾರಿ ಕಾಲೇಜೊಂದರ ಪ್ರಾಂಶುಪಾಲರು ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ(Muslim Girls) ಕಾಲೇಜು ಗೇಟ್ ಹಾಕಿ ಪ್ರವೇಶ ನಿರಾಕರಿಸಿರುವುದು ಅಮಾನವೀಯ ಮಾತ್ರವಲ್ಲ ಸಂವಿಧಾನ ಬಾಹಿರವೂ ಹೌದು. ಕೂಡಲೇ ಕಾಲೇಜಿನ ಪ್ರಾಂಶುಪಾಲರನ್ನು ವಜಾಗೊಳಿಸಬೇಕು’ ಅಂತಾ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಒಂದು ವೇಳೆ ನೀವು ಮಾವು ಬೆಳೆಗಾರರಾಗಿದ್ದಲ್ಲಿ ಈ ಸಲಹೆಯನ್ನು ನೀವು ಪಾಲಿಸಲೇಬೇಕು..!
Basavaraj Bommai) ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವ ಇಂತಹ ಕೃತ್ಯಗಳನ್ನು ತಡೆಯಬೇಕು’ ಎಂದು ವಿಪಕ್ಷ ನಾಯಕ ಒತ್ತಾಯಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.