ಲಿಂಗಾಯತ ಪ್ರತ್ಯೇಕ ಧರ್ಮದ ಹಿಂದೆ ಸಿದ್ದರಾಮಯ್ಯ ಬ್ರೇನ್- ಜಗದೀಶ್ ಶೆಟ್ಟರ್

                     

Last Updated : Nov 7, 2017, 12:52 PM IST
ಲಿಂಗಾಯತ ಪ್ರತ್ಯೇಕ ಧರ್ಮದ ಹಿಂದೆ ಸಿದ್ದರಾಮಯ್ಯ ಬ್ರೇನ್- ಜಗದೀಶ್ ಶೆಟ್ಟರ್ title=
Pic: Youtube

ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಒಂದು ರಾಜಕೀಯ ಪ್ರೇರಿತ ಮತ್ತು ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬ್ರೇನ್ ಇದೇ ಎಂದು ಅವರು ಆರೋಪಿಸಿದ್ದಾರೆ.

ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ ನಂತರ ಲಿಂಗಾಯಿತ ಪ್ರತ್ಯೇಕ ಧರ್ಮದ ಹೋರಾಟ ಪ್ರಾರಂಭವಾಗಿದೆ. ಇದು ರಾಜಕೀಯ ಪ್ರೆರಿತವಲ್ಲದೆ ಮತ್ತೇನು ಅಲ್ಲ. ಬಿಜೆಪಿಯ ಲಿಂಗಾಯತ ಮತ ಸೆಳೆಯುವ ಉದ್ದೇಶದಿಂದ ಈ ಚಿಂತನೆ ನಡೆದಿದೆ. ಇದೊಂದು ರಾಜಕೀಯ ಹುನ್ನಾರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಲೆ ಕೆಲಸ ನಿರ್ವಹಿಸುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

Trending News