ಪೆಟ್ರೋಲ್, ಡೀಸೆಲ್ ದರ ಏರಿಕೆ : ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಟೀಕೆ
ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಮತ್ತು ಅದಕ್ಕೂ ಮೊದಲಿನ ಅಂಕಿ ಅಂಶಗಳನ್ನು ಇಟ್ಟುಕೊಂಡು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ
ಬೆಂಗಳೂರು : ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದಾಗಿ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೇಂದ್ರದಲ್ಲಿ ನರೇಂದ್ರ ಮೋದಿ (Narendra Modi) ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಮತ್ತು ಅದಕ್ಕೂ ಮೊದಲಿನ ಅಂಕಿ ಅಂಶಗಳನ್ನು ಇಟ್ಟುಕೊಂಡು ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ. ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದರು.
ಇದನ್ನೂ ಓದಿ : ಲಸಿಕೆ ಹಾಕಿಸಿಕೊಂಡು ಕರೋನಾ ವಿರುದ್ಧ ಹೋರಾಡಲು ಸಹಕರಿಸುವಂತೆ ಬಿಎಸ್ ವೈ ಮನವಿ
ಕಚ್ಚಾತೈಲ ಆಮದು ಕಡಿಮೆ ಮಾಡಿಲ್ಲ ಎಂದು ಹಿಂದಿನ ಸರ್ಕಾರಗಳನ್ನು (Government) ದೂಷಿಸುವ ಮೊದಲು ಕಳೆದ 7 ವರ್ಷಗಳಿಂದ ತಾವು ಏನು ಮಾಡಿದ್ದಾರೆ ಎಂದು ನೋಡಿಕೊಳ್ಳಲಿ ಎಂದು ಗುಡುಗಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಬ್ಯಾರಲ್‌ವೊಂದಕ್ಕೆ 125 ಡಾಲರ್ ಗೆ ಇದ್ದಾಗ ದೇಶದಲ್ಲಿ ಪೆಟ್ರೋಲ್ (Petrol) ಬೆಲೆ 57 ರೂಪಾಯಿ ಇತ್ತು. ಈಗ ಕಚ್ಚಾತೈಲ ಬೆಲೆ ಪ್ರತೀ ಬ್ಯಾರಲ್ ಗೆ ಕೇವಲ 54.77 ಡಾಲರ್ ಇದೆ, ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 94 ರೂಪಾಯಿ ಆಗಿದೆ. ಇದನ್ನು ಲೂಟಿ ಅಂದರೆ ಏನು ತಪ್ಪು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : Covid-19 ಜಾಸ್ತಿಯಾಗದಂತೆ ಎಚ್ಚರ ವಹಿಸೋಣ: ಸಚಿವ ಎಸ್.ಟಿ. ಸೋಮಶೇಖರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.