ಸಿಂದಗಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel) ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಳಗಾನೂರಿನಲ್ಲಿ ಮಾತನಾಡಿರುವ ಅವರು, ಕಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ನಳೀನ್ ಕುಮಾರ್ ಕಟೀಲ್ ಒಬ್ಬ ಬೇಜವಾಬ್ದಾರಿ, ಅಪ್ರಬುದ್ಧ ರಾಜಕಾರಣಿ. ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಹುಚ್ಚನ ರೀತಿ ಮಾತನಾಡುತ್ತಿದ್ದಾರೆ. ಮೊದಲು ಅವರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದು ಕಿಡಿಕಾರಿದ್ದಾರೆ. ನಳೀನ್ ಕುಮಾರ್ ಗೆ ಮೆಂಟಲ್ ಬ್ಯಾಲೆನ್ಸ್ ಹೋಗಿದೆ. ಕಟೀಲು ನಿಮ್ಹಾನ್ಸ್ನಲ್ಲಿ ತೋರಿಸಿಕೊಳ್ಳೋದು ಒಳ್ಳೆಯದು. ಬಿಜೆಪಿ ವರಿಷ್ಠರು ಕೂಡಲೇ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಅವರಿಗೆ ಸರಿಯಾದ ಚಿಕಿತ್ಸೆಗೆ ಅಗತ್ಯವಿದೆ. ಹೀಗಾಗಿ ಕೂಡಲೇ ಮೆಂಟಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಲಿ ಎಂದು ಸಿದ್ದರಾಮಯ್ಯ(Siddaramaiah) ಕುಟುಕಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್, ಬಿಜೆಪಿ ಪರ್ಸೆಂಟೇಜ್ ಸರಕಾರ ; ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಬಗ್ಗೆ ನಳೀನ್ ಕಟೀಲ್ ನೀಡಿರುವ ಹೇಳಿಕೆ ಖಂಡನೀಯ. ಜವಾಬ್ದಾರಿ ಸ್ಥಾನದಲ್ಲಿರುವವರು ಇಂಥಹ ಮಾತುಗಳನ್ನಾಡಲು ಸಾಧ್ಯವೇ? ನಳೀನ್ ಕಟೀಲ್ ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ. ಹೀಗಾಗಿ ದಯವಿಟ್ಟು ಕಟೀಲ್ ಅವರನ್ನು ಬಿಜೆಪಿ ವರಿಷ್ಠರು ಆಸ್ಪತ್ರೆಗೆ ಸೇರಿಸಬೇಕು. ಈ ಬಗ್ಗೆ ನಾನು ಜೆ.ಪಿ.ನಡ್ಡಾ ಹಾಗೂ ಅಮಿತ್ ಶಾ ಅವರಲ್ಲಿ ಕೇಳಿಕೊಳ್ಳುತ್ತಿದ್ದೇನೆ. ಮೊದಲು ಕಟೀಲ್ ಅವರನ್ನು ನಿಮ್ಹಾನ್ಸ್ ಗೆ ದಾಖಲಿಸಿ ಅವರಿಗೆ ಅಗತ್ಯ ಚಿಕಿತ್ಸೆಯ ವ್ಯವಸ್ಥೆ ಮಾಡಿ ಎಂದು ಹೇಳಿದ್ದಾರೆ.
ನಿನ್ನೆ ನಾನು ಮಾತನಾಡುವಾಗ "ರಾಜಕೀಯ ವಿರೋಧಿಗಳೊಡನೆ ನಾಗರಿಕ ಮೌಲ್ಯದ ಜೊತೆಗೆ ಗೌರವಯುತವಾಗಿ ನಡೆದುಕೊಳ್ಳೋದ್ರಲ್ಲಿ ನಂಬಿಕೆಯಿದೆ" ಎಂದಿದ್ದೆ. ಬಿಜೆಪಿ ಇದನ್ನು ಒಪ್ಪುತ್ತದೆಂದು ಭಾವಿಸಿದ್ದೆ ಆದರೆ, ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ ರಾಹುಲ್ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದು, ಕ್ಷಮೆ ಯಾಚಿಸುತ್ತಾರೆಂದು ಭಾವಿಸುತ್ತೇನೆ.
— DK Shivakumar (@DKShivakumar) October 19, 2021
ಹುಬ್ಬಳ್ಳಿಯಲ್ಲಿ ಮಂಗಳವಾರ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ್ದ ನಳೀನ್ ಕುಮಾರ್ ಕಟೀಲ್(Nalin Kumar Kateel) ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತಾ ವರದಿಗಳು ಹೇಳಿವೆ’ ಎಂದು ಅವರು ಹೇಳಿದ್ದರು. ‘ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಹೇಳಿ?. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ. ಅವರಿಗೆ ಪಕ್ಷವನ್ನು ಸಂಭಾಳಿಸಲು ಆಗುತ್ತಿಲ್ಲ. ಇನ್ನು ದೇಶವನ್ನುಮುನ್ನಡೆಸುತ್ತಾರಾ?’ ಎಂದು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷರು ಪ್ರಶ್ನಿಸಿದ್ದರು.
ಇದನ್ನೂ ಓದಿ: ಮುಸ್ಲಿಂ ಅಭ್ಯರ್ಥಿ ವಿವಾದ ಆರಂಭಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ ಆಕ್ರೋಶ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ