ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಆಧಾರಿತ ಜಾತಿಗಣತಿ ವರದಿ ಬಿಡುಗಡೆಗೆ ಸಿದ್ಧರಾಮಯ್ಯ ಆಗ್ರಹ

ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಕೋಲಾರದಲ್ಲಿ ಇಂದು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಆಧಾರಿತ ಜಾತಿಗಣತಿ ವರದಿ ಬಿಡುಗಡೆ, ಅರ್ಹರಿಗೆ ಮಾತ್ರ ಮೀಸಲು ಸೌಲಭ್ಯ ಒದಗಿಸುವಂತೆ ಆಗ್ರಹಿಸಿದರು.

Last Updated : Mar 28, 2021, 03:27 PM IST
  • ರಾಜ್ಯದಲ್ಲಿ ಯಡಿಯೂರಪ್ಪ (BS Yediyurappa) ನೇತ್ರತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತ ಬಂದಿದೆ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ವರೆಗೆ ಸ್ವೀಕರಿಸದಿರುವುದು ಖಂಡನೀಯ. ತಕ್ಷಣ ವರದಿ ಸ್ವೀಕರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.
 ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಆಧಾರಿತ ಜಾತಿಗಣತಿ ವರದಿ ಬಿಡುಗಡೆಗೆ ಸಿದ್ಧರಾಮಯ್ಯ ಆಗ್ರಹ  title=
Photo Courtesy: Twitter

ಬೆಂಗಳೂರು: ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಕೋಲಾರದಲ್ಲಿ ಇಂದು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಆಧಾರಿತ ಜಾತಿಗಣತಿ ವರದಿ ಬಿಡುಗಡೆ, ಅರ್ಹರಿಗೆ ಮಾತ್ರ ಮೀಸಲು ಸೌಲಭ್ಯ ಒದಗಿಸುವಂತೆ ಆಗ್ರಹಿಸಿದರು.

ರಾಜ್ಯದಲ್ಲಿ ಯಡಿಯೂರಪ್ಪ (BS Yediyurappa) ನೇತ್ರತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತ ಬಂದಿದೆ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ವರೆಗೆ ಸ್ವೀಕರಿಸದಿರುವುದು ಖಂಡನೀಯ. ತಕ್ಷಣ ವರದಿ ಸ್ವೀಕರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.

ಇದನ್ನೂ ಓದಿ : Covid 2nd wave ನಿಯಂತ್ರಿಸಲು ಪೂರ್ವಸಿದ್ಧತೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಸ್ವಾತಂತ್ರ್ಯ ನಂತರದಿಂದ ಈ ವರೆಗೆ ಸಮಾಜದ ವಿವಿಧ ಸಮುದಾಯಗಳಲ್ಲಾದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬದಲಾವಣೆಯ ಬಗ್ಗೆ ತಿಳಿದುಕೊಳ್ಳಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಲು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಅನುಕೂಲವಾಗಲಿದೆ ಎಂದು ತಿಳಿಸಿದರು.

ಬೆಂಗಳೂರು ನಗರದ ಶೇ.90 ಹಾಗೂ ರಾಜ್ಯದ ಗ್ರಾಮೀಣ ಭಾಗದ ಶೇ.100 ರಷ್ಟು ಕುಟುಂಬಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ಮಾಹಿತಿ ಇರುವ ವೈಜ್ಞಾನಿಕ ಸಮೀಕ್ಷೆಯೊಂದರ ವರದಿ ಸ್ವೀಕರಿಸದಿರಲಿ ಕಾರಣ ಏನು ಎಂಬುದನ್ನು ರಾಜ್ಯ ಸರ್ಕಾರ ಹೇಳಲಿ ಎಂದು ಪ್ರಶ್ನಿಸಿದರು.

ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು. ಯಾವ ಸಮುದಾಯಗಳು ಸಂವಿಧಾನದ ನಿಯಮಗಳಡಿ ಮೀಸಲಾತಿಗೆ ಅರ್ಹವಿದ್ದಾವೆ ಅವುಗಳೆಲ್ಲವಕ್ಕೂ ಸರ್ಕಾರ ಮೀಸಲಾತಿ ನೀಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಹಿರಿಯ ಶಾಸಕರಾದ ರಮೇಶ್ ಕುಮಾರ್, ನಜೀರ್ ಅಹಮದ್, ನಂಜೇಗೌಡ, ನಾರಾಯಣಸ್ವಾಮಿ, ರೂಪಾ ಶಶಿಧರ್ ಅವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News