ಬೆಂಗಳೂರು: ಮೆಜೆಸ್ಟಿಕ್ʼನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಹೊರಟಂತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ರೈತರು ಫ್ರೀಡಂ ಪಾರ್ಕ್ʼನಲ್ಲಿ ಸಭೆ ನಡೆಸಿ, ಈ ಬಳಿಕ ರಾಜಭವನ ಮುತ್ತಿಗೆಗೆ ತೆರಳಿದಂತ ಕೆಪಿಸಿಸಿ ಅಧ್ಯಕ್ಷ್ಯ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿ ಕಾಂಗ್ರೆಸ್ʼನ ಹಲವು ಮುಖಂಡರು, ರೈತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಕಾಂಗ್ರೆಸ್(Congress) ಹಾಗೂ ಕಿಸಾನ್ ಘಟಕದಿಂದ ರೈತ ವಿರೋಧಿ ಕೃಷಿ ಮಸೂದೆಗಳ ವಿರುದ್ಧ ರಾಜಭವನ ಮುತ್ತಿಗೆಗೆ ಕರೆ ನೀಡಲಾಗಿತ್ತು. ಮೆಜೆಸ್ಟಿಕ್ʼನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಹೊರಟಂತ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್ʼನಲ್ಲಿ ಸಭೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದರು.
B.S.Yediyurappa: 'ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯವಾಗುವುದೇ ನಮ್ಮ ಗುರಿ'
ಈ ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳಿದಂತ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಪೊಲೀಸರು ಮನವೊಲಿಸೋದಕ್ಕೆ ಮುಂದಾಗಿದ್ದಾರೆ. ಆದ್ರೇ ಪೊಲೀಸರ ಮನವೊಲಿಕೆಗೆ ಒಪ್ಪದೇ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಂತ ಕಾಂಗ್ರೆಸ್ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
H.Vishwanath: ಕುರುಬ ಸಮಾಜದಿಂದ ಸಿದ್ದರಾಮಯ್ಯರನ್ನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ 'ಹಳ್ಳಿ ಹಕ್ಕಿ'..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.