ಬೆಂಗಳೂರು: ಇತ್ತೀಚೆಗೆ COVID-19 ವಿಷಯದಲ್ಲಿ ರಾಜ್ಯ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದೆ. ಅದರ ಬಗ್ಗೆ ಲೆಕ್ಕಕೊಡಿ ಎಂದು ಒತ್ತಡ‌ ಹೇರುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಈಗ  ಕೋವಿಡ್ -19 (Covid-19) ಪಾಸಿಟಿವ್ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೂ ಕರ್ತವ್ಯ ಮರೆಯದ ಸಿದ್ದರಾಮಯ್ಯ ಆಸ್ಪತ್ರೆಯಿಂದಲೇ ಪ್ರವಾಹ ಪರಿಸ್ಥಿತಿ ನಿರ್ವಹಿಸಲಾಗಸ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ಸ್ವತಂತ್ರ್ಯ ದಿನಾಚರಣೆ ಅನುದಾನ‌ ಕಟ್ ಮಾಡಿದ ರಾಜ್ಯ ಸರ್ಕಾರ, ಸರಳವಾಗಿ ಆಚರಿಸುವಂತೆ ಸೂಚನೆ


COMMERCIAL BREAK
SCROLL TO CONTINUE READING

ಈ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ, 'ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು  ಪ್ರಶ್ನಿಸಿದ್ದಾರೆ.


ರಾಜ್ಯದಲ್ಲಿ ಧಾರಾಕಾರ ಮಳೆ, ರೆಡ್ ಅಲರ್ಟ್: ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಸಿಎಂ ಸೂಚನೆ


'ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ (Uttar Karnataka) ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು' ಎಂದು ಒತ್ತಾಯಿಸಿದ್ದಾರೆ.


'ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ (BS Yediyurappa) ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು' ಎಂದು ಆಗ್ರಹಿಸಿದ್ದಾರೆ.


'ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ.‌‌ ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.


'ರಾಜ್ಯ ಕಂದಾಯ ಸಚಿವರೂ ಕ್ವಾರಂಟೈನ್‌ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಇತ್ತೀಚೆಗೆ ವರ್ಗಾವಣೆಗೊಂಡಿರುವ ಬಿಬಿಎಂಪಿ (BBMP) ಆಯುಕ್ತರಿಗೆ ಕಂದಾಯ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿರುವುದರಿಂದ ಪ್ರವಾಹ ಪರಿಸ್ಥಿತಿಯ ಉಸ್ತುವಾರಿ ಕಾರ್ಯ ಕುಂಠಿತಗೊಂಡಿದೆ. ಮುಖ್ಯಮಂತ್ರಿಗಳು ಈ ಕಡೆ ತಕ್ಷಣ ಗಮನಹರಿಸಬೇಕು' ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.