"ತೇಜಸ್ವಿ ಸೂರ್ಯ ಬ್ಯಾಕಿಂಗ್ ದಂಧೆ ತಡೆಗೆ ಸೀಮಿತ ಆಗದೆ ಪಿಎಂ ಬಳಿ ಆಕ್ಸಿಜನ್ ಪೂರೈಕೆಗೆ ಒತ್ತಡ ಹೇರಲಿ"

ಕರ್ನಾಟಕದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಅನ್ನು ರಾಜ್ಯದ ಬಳಕೆಗೇ ಮೀಸಲಿಡಬೇಕು, ಈಗ ರಾಜ್ಯಕ್ಕೆ ನಿಗದಿ ಮಾಡಿರುವ ಆಕ್ಸಿಜನ್ ಪ್ರಮಾಣ ಬೇಡಿಕೆಯ ಶೇ. 50ರಷ್ಟು ಸಹ ಇಲ್ಲ. ಬೇಡಿಕೆಗೆ ಅನುಗುಣವಾಗಿ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

Last Updated : May 5, 2021, 10:41 PM IST
"ತೇಜಸ್ವಿ ಸೂರ್ಯ ಬ್ಯಾಕಿಂಗ್ ದಂಧೆ ತಡೆಗೆ ಸೀಮಿತ ಆಗದೆ ಪಿಎಂ ಬಳಿ ಆಕ್ಸಿಜನ್ ಪೂರೈಕೆಗೆ ಒತ್ತಡ ಹೇರಲಿ"  title=
file photo

ಬೆಂಗಳೂರು: ಕರ್ನಾಟಕದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಅನ್ನು ರಾಜ್ಯದ ಬಳಕೆಗೇ ಮೀಸಲಿಡಬೇಕು, ಈಗ ರಾಜ್ಯಕ್ಕೆ ನಿಗದಿ ಮಾಡಿರುವ ಆಕ್ಸಿಜನ್ ಪ್ರಮಾಣ ಬೇಡಿಕೆಯ ಶೇ. 50ರಷ್ಟು ಸಹ ಇಲ್ಲ. ಬೇಡಿಕೆಗೆ ಅನುಗುಣವಾಗಿ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Supreme Court On Quota - ಎಷ್ಟು ತಲೆಮಾರಿನವರೆಗೆ ಜಾರಿಯಲ್ಲಿರಲಿದೆ ಕೋಟಾ?: ಸುಪ್ರೀಂ ಪ್ರಶ್ನೆ

ಆಕ್ಸಿಜನ್ ಕೊರತೆ ವಿಚಾರದ ಬಗ್ಗೆ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ಚರ್ಚಿಸಿದ್ದೇನೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಅಗತ್ಯಕ್ಕೆ ಅನುಗುಣವಾಗಿ ಆಕ್ಷಿಜನ್ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದೇನೆ. ನಿನ್ನೆಯಿಂದಲೇ ಈ ಬಗ್ಗೆ ಗಮನ ಹರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜನಗರ ದುರಂತದ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಹೇಳಿದ್ದೆ. ಇದೀಗ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಇದಕ್ಕೆ ನನ್ನ ಸ್ವಾಗತವಿದೆ. ಘಟನೆಗೆ ಕಾರಣರಾದವರಿಗೆ ಶಿಕ್ಷೆ ಆಗಬೇಕು ಎಂಬುದಷ್ಟೇ ನನ್ನ ಉದ್ದೇಶ. ಬೆಂಗಳೂರು, ಕೋಲಾರ, ಬೆಳಗಾವಿ, ಯಾದಗಿರಿ, ಬೀದರ್, ಕಲಬುರ್ಗಿಯಲ್ಲಿಯೂ ಆಕ್ಸಿಜನ್ ಕೊರತೆಯಿಂದ ಕೊರೊನಾ ಸೋಂಕಿತರು ಮೃತರಾಗಿರುವ ವರದಿಗಳು ಬಂದಿವೆ. ಈ ಬಗ್ಗೆಯೂ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ.

ರಾಜ್ಯದಲ್ಲಿ 812 ಟನ್ ಆಕ್ಸಿಜನ್ ಉತ್ಪಾದನೆ ಆಗುತ್ತದೆ. ಆದರೆ, ಕೇಂದ್ರ ಸರ್ಕಾರ ರಾಜ್ಯದ ಬಳಕೆಗೆ ನಿಗದಿ ಮಾಡಿರುವುದು 675 ಟನ್ ಮಾತ್ರ. 130 ಟನ್ ಒರಿಸ್ಸಾದಿಂದ ನಿಗದಿ ಮಾಡಲಾಗಿದೆ. ಆಕ್ಸಿಜನ್ ಟ್ಯಾಂಕರ್‍ಗಳು ಒರಿಸ್ಸಾದಿಂದ ನಮ್ಮ ರಾಜ್ಯಕ್ಕೆ ಬರಲು 48 ಗಂಟೆಗಳು ಬೇಕು. ಆಕ್ಸಿಜನ್ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬಕ್ಕೆ ಇದೂ ಒಂದು ಕಾರಣವಾಗಿದೆ.

ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇರುವುದು ಇಡೀ ದೇಶಕ್ಕೆ ಗೊತ್ತು. ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಬೆಡ್ ಬ್ಯಾಕಿಂಗ್ ದಂಧೆ ತಡೆಯುವುದಕ್ಕಷ್ಟೇ ಸೀಮಿತ ಆಗದೆ, ಎಲ್ಲ ಸಂಸದರನ್ನು ಪ್ರಧಾನಿಯವರ ಬಳಿಗೆ ಕರೆದುಕೊಂಡು ಹೋಗಿ ಆಕ್ಸಿಜನ್ ಪೂರೈಕೆಗೆ ಒತ್ತಡ ಹೇರಲಿ.

ಇದನ್ನೂ ಓದಿ: ಏನಿದು ಮರಾಠಾ ಮೀಸಲಾತಿ ಕಾಯ್ದೆ ? ಇದನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದೇಕೆ?

ಕೇರಳದಲ್ಲಿ ಅವರ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಉತ್ಪಾದನೆ ಮಾಡಿಕೊಳ್ಳುತ್ತಾರೆ. ನಮ್ಮಲ್ಲಿ ಏಕೆ ಹೀಗಿಲ್ಲ?ತಜ್ಞರ ವರದಿ ಪ್ರಕಾರ ಮೇ ತಿಂಗಳಲ್ಲಿ ಕೊರೊನಾ ಸೋಂಕು ಇನ್ನೂ ಹೆಚ್ಚಾಗುತ್ತದೆ. ಆದ್ದರಿಂದ ಎಲ್ಲ ಜಿಲ್ಲೆಗಳಲ್ಲಿ ಆಕ್ಸಿಜನ್ ತಯಾರಿಸಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಡಬೇಕು.

ಅನೇಕ ಆಸ್ಪತ್ರೆಗಳಲ್ಲಿ ಆಕ್ಸಿಜನ್, ರೆಮಿಡಿಸಿವರ್ ಇಂಜೆಕ್ಷನ್ ಇಲ್ಲ. ಜೊತೆಗೆ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ. ಅವರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News