"ಸಿಎಂ ಯಡಿಯೂರಪ್ಪ ಘೋಷಿಸಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಿದೆ"

ಕೊರೊನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಿದೆ ಜೊತೆಗೆ ಸಂಪೂರ್ಣ ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕಿಡಿ ಕಾರಿದ್ದಾರೆ.

Last Updated : May 19, 2021, 07:36 PM IST
  • ಕೊರೊನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಿದೆ ಜೊತೆಗೆ ಸಂಪೂರ್ಣ ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕಿಡಿ ಕಾರಿದ್ದಾರೆ.
"ಸಿಎಂ ಯಡಿಯೂರಪ್ಪ ಘೋಷಿಸಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಿದೆ" title=

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಿದೆ ಜೊತೆಗೆ ಸಂಪೂರ್ಣ ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕಿಡಿ ಕಾರಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ಯಾಕೇಜ್ ಘೋಷಿಸುವ ಮುನ್ನ ನೆರೆ ರಾಜ್ಯಗಳನ್ನು ನೋಡಿಯಾದರೂ ಪಾಠ ಕಲಿಯಬೇಕಿತ್ತುಆದರೆ ಈಗ ಮೂಗಿಗೆ ತುಪ್ಪ ಸವರುವ ಪ್ಯಾಕೇಜ್ ಘೋಷಿಸುವ ಮೂಲಕ ಇತರ ರಾಜ್ಯಗಳ ಮುಂದೆ ತಲೆ ತಗ್ಗಿಸುವಂತೆ ಮಾಡಿದ್ದಾರೆ ಎಂದು ಸಿದ್ಧರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.

ಬಡ ಕುಟುಂಬಗಳಿಗೆ ತಲಾ ಹತ್ತು ಕೆ.ಜಿ. ಅಕ್ಕಿ ಮತ್ತು ದುಡಿಯುವ ವರ್ಗದವರಿಗೆ ತಲಾ ಹತ್ತು ಸಾವಿರ ರೂ. ಪರಿಹಾರ ನೀಡುವ ಪ್ಯಾಕೇಜ್ ಘೋಷಣೆ ಮಾಡಿ, ಸಂಪೂರ್ಣ ಲಾಕ್‍ಡೌನ್ ಜಾರಿಗೆ ತಂದಿದ್ದರೆ ಇನ್ನಷ್ಟು ಪರಿಣಾಮಕಾರಿಯಾಗಿ ಸೋಂಕು ನಿಯಂತ್ರಿಸಬಹುದಿತ್ತು ಎಂದು ಹೇಳಿದರು.

ಇದನ್ನೂ ಓದಿ: ಒಂದೇ ದಿನದಲ್ಲಿ 20 ಲಕ್ಷ ಕೊರೊನಾ ಪರೀಕ್ಷೆ ಕೈಗೊಂಡ ಭಾರತ

ಕಳೆದ ವರ್ಷ ಯಡಿಯೂರಪ್ಪ ಅವರು  2100 ಕೋಟಿ ಪ್ಯಾಕೇಜ್ ಘೋಷಿಸಿದ್ದರು. ಅದರಲ್ಲಿ 850 ಕೋಟಿ ರೂ. ಗಳಷ್ಟು ಕಟ್ಟಡ ಕಾರ್ಮಿಕರ ನಿಧಿಯಿಂದಲೇ ಹಣವನ್ನು ಖರ್ಚು ಮಾಡಿ, ಸರ್ಕಾರ ಖರ್ಚು ಮಾಡಿದೆ ಎಂದು ಸುಳ್ಳು ಹೇಳಿದ್ದರು.ಕಳೆದ ಬಾರಿಯ 2100 ಕೋಟಿ ರೂ.ಗಳ ಪ್ಯಾಕೇಜ್‍ನಲ್ಲಿ ಬಹುಪಾಲು ಹಣವನ್ನು ನೊಂದ ಜನರಿಗೆ ನೀಡಲೇ ಇಲ್ಲ.ಆಟೋ, ಕ್ಯಾಬ್, ಚಾಲಕರುಗಳಿಗೆ ಸಂಬಂಧಿಸಿದಂತೆ 7.75 ಲಕ್ಷ  ಜನರಿಗೆ ತಲಾ ಐದು ಸಾವಿರ ಪರಿಹಾರ ಕೊಡುವುದಾಗಿ ಘೋಷಿಸಿ, ನೀಡಿದ್ದು, ಕೇವಲ 2.10 ಲಕ್ಷ ಜನರಿಗೆ ಮಾತ್ರ ಎಂದು ಸಿದ್ಧರಾಮಯ್ಯ ನವರು ಹಲವು ವೈಫಲ್ಯಗಳನ್ನು ಪಟ್ಟಿ ಮಾಡಿದರು.

ಸಿಎಂ ಯಡಿಯೂರಪ್ಪ ಅವರು ಈ ಹಿಂದೆ ಬಜೆಟ್ ಮೇಲಿನ ಚರ್ಚೆ ನಡೆದಿದ್ದ ಸಂದರ್ಭದಲ್ಲಿ ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ, ಕೇರಳ ರಾಜ್ಯಗಳಿಗಿಂತ ನಮ್ಮ ಆರ್ಥಿಕತೆ ಉತ್ತಮವಾಗಿದೆ ಎಂದು ಹೇಳಿದ್ದರು. ಆದರೆ ಈಗ ರಾಜ್ಯದ ಆರ್ಥಿಕ ಸ್ಥಿತಿ ಸರಿ ಇಲ್ಲ ಎನ್ನುತ್ತಿದ್ದಾರೆ. ಇದರಲ್ಲಿ ಯಾವುದು ಸತ್ಯ? ಯಾವುದು ಸುಳ್ಳು? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ನಿಮ್ಮ ಜೀವನದ ಈ ವಿಚಾರಗಳ ಬಗ್ಗೆ ಯಾವತ್ತೂ ಇನ್ನೊಬ್ಬರೊಂದಿಗೆ ಚರ್ಚಿಸದಿರಿ

ಇನ್ನೊಂದೆಡೆಗೆ ಹಲವು ರಾಜ್ಯಗಳು ತಮ್ಮಆರ್ಥಿಕ ಪರಿಸ್ಥಿತಿ ಚೆನ್ನಾಗಿ ಇರದೇ ಇದ್ದರೂ ಸಹಿತ ಜನಪರ ಪ್ಯಾಕೇಜ್ ಗಳನ್ನು ಘೋಷಿಸಿವೆ. ಅಂತಹ ರಾಜ್ಯಗಳ ಮುಂದೆ ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಏನೇನೂ ಅಲ್ಲ. ಇದು ಜನರ ಕಣ್ಣಿಗೆ ಮಣ್ಣೆರಚುವ ತಂತ್ರ ಎಂದು ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News