ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ. ಸದ್ಯ ರಾಜ್ಯದಲ್ಲಿ ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಯುತ್ತಿದೆ ಎಂದು ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ವ್ಯಂಗ್ಯವಾಡಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್(Donald Trump)ಇದ್ದ ಹಾಗೆ. ತಮ್ಮ ಸೋಲನ್ನು ಒಪ್ಪಿಕೊಳ್ಳಲು ಅವರು ಸಿದ್ದರಿಲ್ಲ. ಸಿದ್ದು ಸಂಸ್ಕಾರ, ಸಂಸ್ಕೃತಿ ಇಲ್ಲದ ಮನುಷ್ಯ. ನಾವು ಅವರನ್ನು ಅಚಾನಕ್ ಆಗಿ ನಾವು ಕರೆದುಕೊಂಡು ಬಂದಿದ್ದಕ್ಕೆ ಅದೃಷ್ಟದಿಂದ ಸಿಎಂ ಆದವರು. ಸಿದ್ದರಾಮಯ್ಯ ಯಾರ ಯಶಸ್ಸನ್ನು ಸಹಿಸುವುದಿಲ್ಲ ಎಂದು ಕಿಡಿಕಾರಿದರು.


Congress: ಅಹಿಂದ ಪ್ರಯೋಗಕ್ಕೆ ಸಿದ್ದರಾಮಯ್ಯ ಸಜ್ಜು: ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತ!


ತಮ್ಮ ಸಮುದಾಯದ ಸ್ವಾಮೀಜಿಯವರ ಹೋರಾಟವನ್ನು ಅವರು ಸಹಿಸುವುದಿಲ್ಲ. ಸಿದ್ದರಾಮಯ್ಯ(Siddaramaiah)ಗೆ ಸಿಎಂ ಪಟ್ಟ ಅಂದರೇ ತುಂಬಾ ಇಷ್ಟ. ಅವರೊಂದು ತರಹ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಯಡಿಯೂರಪ್ಪ ನೋಡಿದ ಕೂಡಲೇ ಅವರಿಗೆ ಸಿಎಂ ಮಿಠಾಯಿ ನೆನಪಾಗುತ್ತದೆ. ಅದ‌ನ್ನು ಒಮ್ಮೆ ಪಡೆಯಬೇಕೆಂಬ ಚಡಪಡಿಕೆ ಶುರುವಾಗುತ್ತದೆ.. ಹೀಗಾಗಿ ನಾಯಕತ್ವದ ಬದಲಾವಣೆ ಬಗ್ಗೆ ಮಾತನಾಡುತ್ತಾರ ಅಷ್ಟೇ ಎಂದು ವ್ಯಂಗ್ಯವಾಡಿದರು.


Vistadome Coach : ಇನ್ನು ಸಂಪೂರ್ಣ ಗಾಜಿನ ಬೋಗಿಯಲ್ಲಿ ಕುಳಿತು ಸಹ್ಯಾದ್ರಿಯ ದರ್ಶನ ಮಾಡಿ..!


ಅವರಲ್ಲಿ ನಾನು ನಾನು ಅನ್ನೋ ಸ್ವಾರ್ಥ ಹೆಚ್ಚಿದೆ. ಕಾಂಗ್ರೆಸ್‌ ನಲ್ಲಿ ಡಿಕೆ ಶಿವಕುಮಾರ್(DK Shivakumar)) ನಾಯಕತ್ವ ಪ್ರಬಲವಾಗುತ್ತಿದೆ. ಪಕ್ಷ ಹಾಗೂ ಸಮುದಾಯ ಎರಡರಲ್ಲೂ ಸಿದ್ದು ಏಕಾಂಗಿಯಾಗುತ್ತಿದ್ದಾರೆ. ಇವೆಲ್ಲವನ್ನು ಗಮನಿಸುತ್ತಾ ಹೋದರೆ ರಾಜಕೀಯ ಅಸ್ತಿತ್ವಕ್ಕೆ ಚಡಪಡಿಕೆ ಶುರುವಾಗಿದೆ. ನಾನು ಸಿದ್ದರಾಮಯ್ಯ ಮೈಸೂರಿನಲ್ಲೇ ಓದಿದ್ದು. ಅವರು ಯಾವ ವಿದ್ಯಾರ್ಥಿ ಹೋರಾಟದಲ್ಲೂ ಹಿಂದೆ ಭಾಗಿಯಾಗಿರಲಿಲ್ಲ ಎಂದು ಹೇಳಿದರು.


ಅಧಿಕಾರಕ್ಕೇರುವ ಕನಸು ಕಾಣುವಾಗಲೆಲ್ಲಾ ಅಹಿಂದ ವರ್ಗ ನೆನಪಾಗುವುದೇಕೆ? : ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.