ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ!!

Chief Minister Siddaramaiah's 77th birthday: ಯಾವುದೇ ಷಡ್ಯಂತ್ರಗಳು ಫಲಸದೇ, ಶತೃಗಳ ಆಸೆ ಈಡೇರದೇ ಸಿದ್ದರಾಮಯ್ಯನವರು 5 ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯಲಿ ಎಂದು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. 

Written by - Zee Kannada News Desk | Last Updated : Aug 12, 2024, 05:39 PM IST
  • ಸಿಎಂ ಸಿದ್ದರಾಮಯ್ಯರ 77ನೇ ವರ್ಷದ ಹುಟ್ಟುಹಬ್ಬದ ಅಭಿಮಾನಿಗಳಿಗೆ ವಿಶೇಷ ಪೂಜೆ
  • ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಫ್ಯಾನ್ಸ್‌
  • ಸಿದ್ದರಾಮಯ್ಯನವರೇ 5 ವರ್ಷವೂ ಮುಖ್ಯಮಂತ್ರಿ ಆಗಿ ಮುಂದುವರೆಯಲಿ ಪ್ರಾರ್ಥನೆ
ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ!!  title=
ವಿಶೇಷ ಪೂಜೆ ಸಲ್ಲಿಸಿದ ಫ್ಯಾನ್ಸ್‌!

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯನವರ 77ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿ ಬಳಗದ ವತಿಯಿಂದ ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಲಾಯಿತು.  

ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಬೆಳ್ಳೇಗೌಡ ಅವರ ನೇತೃತ್ವದಲ್ಲಿ ಶ್ರೀಚಾಮರಾಜೇಶ್ವರಸ್ವಾಮಿಗೆ ವಿವಿಧ ಬಗೆಯ ಅಭಿಷೇಕ, ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಇದನ್ನೂ ಓದಿ: ಸಕಲೇಶಪುರದಲ್ಲಿ ಭೂಕುಸಿತ... ರೈಲು ಸಂಚಾರ ಸ್ಥಗಿತ, ಸಾವಿರಾರು ಪ್ರಯಾಣಿಕರ ಪರದಾಟ

ಈ ವೇಳೆ ಅಭಿಮಾನಿಗಳು ಮಾತನಾಡಿ, ನಾಡಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ 77ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಶ್ರೀಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದೇವೆ. ಶ್ರೀಚಾಮರಾಜೇಶ್ವರಸ್ವಾಮಿ ಅವರಿಗೆ ಹೆಚ್ವಿನ ಆರೋಗ್ಯ, ಆಯಸ್ಸು ಕರುಣಿಸಲಿ ಹಾಗೂ 5 ವರ್ಷಗಳ ಕಾಲ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿ ಎಂದು ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.

ಯಾವುದೇ ಷಡ್ಯಂತ್ರಗಳು ಫಲಸದೇ, ಶತೃಗಳ ಆಸೆ ಈಡೇರದೇ ಸಿದ್ದರಾಮಯ್ಯನವರು 5 ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯಲಿ ಎಂದು ಇದೇ ವೇಳೆ ಅವರು ಆಶಿಸಿದರು. ತಾಲೂಕು ಕುರುಬರ ಸಂಘದ ಅಧ್ಯಕ್ಷ ಉಮೇಶ್ ಎಸ್ ಪಿಕೆ, ಅಭಿಮಾನಿ ಬಳಗದ ಪ್ರಧಾನ ಕಾರ್ಯದರ್ಶಿ ಕುದೇರು ಲಿಂಗಣ್ಣ ಮುಂತಾದವರು ಉಪಸ್ಥಿತರಿದ್ದರು. 

ಇದನ್ನೂ ಓದಿ: ನಾಳೆ ರಾಜಧಾನಿಯ ಕೆಲವೆಡೆ ಕರೆಂಟ್ ಕಟ್ !ಸಂಜೆ 4 ಗಂಟೆವರೆಗೂ ಆಗಲಿದೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News