ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯನವರ 77ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿ ಬಳಗದ ವತಿಯಿಂದ ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಲಾಯಿತು.  


COMMERCIAL BREAK
SCROLL TO CONTINUE READING

ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಬೆಳ್ಳೇಗೌಡ ಅವರ ನೇತೃತ್ವದಲ್ಲಿ ಶ್ರೀಚಾಮರಾಜೇಶ್ವರಸ್ವಾಮಿಗೆ ವಿವಿಧ ಬಗೆಯ ಅಭಿಷೇಕ, ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.


ಇದನ್ನೂ ಓದಿ: ಸಕಲೇಶಪುರದಲ್ಲಿ ಭೂಕುಸಿತ... ರೈಲು ಸಂಚಾರ ಸ್ಥಗಿತ, ಸಾವಿರಾರು ಪ್ರಯಾಣಿಕರ ಪರದಾಟ


ಈ ವೇಳೆ ಅಭಿಮಾನಿಗಳು ಮಾತನಾಡಿ, ನಾಡಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ 77ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಶ್ರೀಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದೇವೆ. ಶ್ರೀಚಾಮರಾಜೇಶ್ವರಸ್ವಾಮಿ ಅವರಿಗೆ ಹೆಚ್ವಿನ ಆರೋಗ್ಯ, ಆಯಸ್ಸು ಕರುಣಿಸಲಿ ಹಾಗೂ 5 ವರ್ಷಗಳ ಕಾಲ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿ ಎಂದು ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.


ಯಾವುದೇ ಷಡ್ಯಂತ್ರಗಳು ಫಲಸದೇ, ಶತೃಗಳ ಆಸೆ ಈಡೇರದೇ ಸಿದ್ದರಾಮಯ್ಯನವರು 5 ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯಲಿ ಎಂದು ಇದೇ ವೇಳೆ ಅವರು ಆಶಿಸಿದರು. ತಾಲೂಕು ಕುರುಬರ ಸಂಘದ ಅಧ್ಯಕ್ಷ ಉಮೇಶ್ ಎಸ್ ಪಿಕೆ, ಅಭಿಮಾನಿ ಬಳಗದ ಪ್ರಧಾನ ಕಾರ್ಯದರ್ಶಿ ಕುದೇರು ಲಿಂಗಣ್ಣ ಮುಂತಾದವರು ಉಪಸ್ಥಿತರಿದ್ದರು. 


ಇದನ್ನೂ ಓದಿ: ನಾಳೆ ರಾಜಧಾನಿಯ ಕೆಲವೆಡೆ ಕರೆಂಟ್ ಕಟ್ !ಸಂಜೆ 4 ಗಂಟೆವರೆಗೂ ಆಗಲಿದೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.