'ಸಿದ್ದರಾಮಯ್ಯ ಈಗ ಚಾರಿತ್ರ್ಯ ಹರಣ ಮಾಡಿ ರಾಜಕೀಯ ಲಾಭ ಪಡೆಯುವ ಯತ್ನ ನಡೆಸುತ್ತಿದ್ದಾರೆ'

ಸಿದ್ದರಾಮಯ್ಯ ಸರ್ಕಾರದ ಹೊಲಸು, ದುರ್ನಾತದ ದಾಖಲೆ ಕೊಡಬಲ್ಲೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.‌ ವಿಕಾಸಸೌಧದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್ ಐ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು.

Written by - Prashobh Devanahalli | Edited by - Manjunath N | Last Updated : Jul 16, 2022, 07:51 PM IST
  • ಪಿಎಸ್ ಐ ಅಕ್ರಮದ ತ‌ನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದ್ದು,‌ಯಾವ ಒತ್ತಡ ಏನೂ ಇಲ್ಲ.
  • ಬದಲಾಗಿ ಗಂಭೀರವಾಗಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.
 'ಸಿದ್ದರಾಮಯ್ಯ ಈಗ ಚಾರಿತ್ರ್ಯ ಹರಣ ಮಾಡಿ ರಾಜಕೀಯ ಲಾಭ ಪಡೆಯುವ ಯತ್ನ ನಡೆಸುತ್ತಿದ್ದಾರೆ' title=
file photo

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಹೊಲಸು, ದುರ್ನಾತದ ದಾಖಲೆ ಕೊಡಬಲ್ಲೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.‌ ವಿಕಾಸಸೌಧದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್ ಐ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು.

ಪಿಎಸ್ ಐ ಅಕ್ರಮದ ತ‌ನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದ್ದು,‌ಯಾವ ಒತ್ತಡ ಏನೂ ಇಲ್ಲ. ಬದಲಾಗಿ ಗಂಭೀರವಾಗಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸಿಐಡಿಗೆ ಫ್ರೀ ಹ್ಯಾಂಡ್ ನೀಡಿದ್ದೇವೆ. ಹಾಗಿದ್ದರೂ ವಿರೋಧ ಪಕ್ಷದ ಮುಖಂಡರು ಇಂತಹ ಹೇಳಿಕೆ ಕೊಟ್ಟು ರಾಜಕೀಯ ಮಾಡಬಾರದು ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಹಿರಿಯ ರಾಜಕಾರಣಿಗಳು. ಅವರ ಆಡಳಿತ ಅವಧಿಯಲ್ಲಿ ಎಷ್ಟು ಹೊಲಸು ಹಾಗೂ ದುರ್ನಾತವಿತ್ತು ಎಂಬ ಬಗ್ಗೆ ದಾಖಲೆ ನೀಡಬಲ್ಲೆ. ಇವಾಗ ಚಾರಿತ್ರಹರಣ ಮಾಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಶಿವಣ್ಣನ 60ನೇ ಹುಟ್ಟುಹಬ್ಬಕ್ಕೆ ‘ಗೋಸ್ಟ್’! ಪೊಸ್ಟರ್ ರಿಲೀಸ್ ಮಾಡಲಿರುವ ಕಿಚ್ಚ ಸುದೀಪ್

ಇನ್ನು ನನ್ನ ಅವಧಿಯಲ್ಲಿ  ಹಗರಣಗಳು ನಡೆಸಿದ್ದರೆ ಅದನ್ನು ತನಿಖೆ ಮಾಡಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ,ಸಮಯ ಬಂದಾಗ ಯಾವುದೇ ಇತರ ಪ್ರಕರಣದ ತನಿಖೆ ಮಾಡುವುದು ತಪ್ಪಲ್ಲ. ನಮ್ಮ ಕಣ್ಣ ಮುಂದೆ ಇರುವುದು ಸದ್ಯ ಪಿಎಸ್ ಐ ಹಗರಣದ ತನಿಖೆ. ಈ ಪ್ರಕರಣದಲ್ಲಿ ಮಧ್ಯವರ್ತಿ, ಹಣ ಕೊಟ್ಟವರ ವಿರುದ್ಧವೂ ಕ್ರಮ ಆಗುತ್ತಿದೆ. ಇನ್ನೊಮ್ಮೆ ಪರೀಕ್ಷೆಯಲ್ಲಿ ಇಂತಹ ಘಟನೆ ಆಗಬಾರದು. ಸದ್ಯ ತನಿಖೆ ಆಗುತ್ತಿದೆ, ಗೃಹ‌ ಸಚಿವನಾಗಿ ನಾನು ಯಾವುದೇ ಊಹೆಯ ಮಾತು ಹೇಳಲ್ಲ ಎಂದರು.

ಜೈಲುಗಳಲ್ಲಿ ಜ್ಯಾಮರ್ ಅಳವಡಿಕೆ

ಇನ್ನು ಜೈಲುಗಳಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಅಕ್ರಮದ ತಡೆ ವಿಚಾರವಾಗಿ ಮಾತನಾಡಿದ ಅವರು, ಒಂದೆರಡು ಜೈಲುಗಳಲ್ಲಿ ಕೆಲವರು ಇದ್ದಾರೆ ಅದನ್ನು ಸರಿಪಡಿಸುತ್ತೇವೆ. ಮುರುಗನ್ ಸಮಿತಿ ವರದಿ ಆಧಾರದಲ್ಲಿ ಹರಪ್ಪನ ಅಗ್ರಹಾರದಲ್ಲಿ 15 ಸಿಬ್ಬಂದಿ ಅಮಾನತು ಮಾಡಲಾಗಿದೆ. 30 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ .ಇವಾಗ ಬಹುತೇಕ ಹೊಸ ಸಿಬ್ಬಂದಿಗಳು ಇದ್ದಾರೆ . ಜೈಲು ಸಿಬ್ಬಂದಿ ಅಲರ್ಟ್ ಆಗಿದ್ದಾರೆ, ಎಲ್ಲವನ್ನು ಹಿಡಿಯುತ್ತಿದ್ದಾರೆ ಎಂದರು.

ಫೋನ್, ನಿಷೇಧಿತ ವಸ್ತು ಬಳಕೆ ಮಾಡಿದರೆ ಎಫ್ ಐ ಆರ್ ಆಗುತ್ತಿದೆ. ಇಂತಹ ಪ್ರಕರಣದಲ್ಲಿ ಕೈದಿಗಳು ಸಿಕ್ಕಿ ಬಿದ್ದರೆ ಆ ಕೈದಿಗಳ ಶಿಕ್ಷೆ ಪ್ರಮಾಣ ಮುಗಿದ ಬಳಿಕ ಐದು ವರ್ಷ ಶಿಕ್ಷೆ ವಿಧಿಸುವ ಅವಕಾಶ ಇದೆ. ಹಾಗೂ ಜೈಲು ಸಿಬ್ಬಂದಿಯ ವಿರುದ್ಧವೂ ಎಫ್ ಐ ಆರ್ ದಾಖಲು ಮಾಡಲಾಗುತ್ತಿದೆ. ಈ ರೀತಿ ಬಿಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಭಿನಯ ಚಕ್ರವರ್ತಿ ಸುದೀಪ್‌ 13 ವರ್ಷಗಳ ನಂತರ ರಾಜಧಾನಿ ದೆಹಲಿಗೆ ಹೋಗಿದ್ದೇಕೆ..?

ಇನ್ನು ಹರಪ್ಪನ ಅಗ್ರಹಾರದಲ್ಲಿ 4 ಜಿ ಜಾಮರ್ ಹಾಕಲಾಗುವುದು. ಅತ್ಯಂತ ಶೀಘ್ರವಾಗಿ ಈ ಕ್ರಮ ಕೈಗೊಳ್ಳಲಾಗುವುದು. ಕೆಲವು ಸಿಬ್ಬಂದಿ ಅನಾಚಾರದಲ್ಲಿ ಕೈಜೋಡಿಸಿದ್ದರು, ಆದರೆ ಇವಾಗ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅದು ವಿಚಾರಣೆ ಹಂತದಲ್ಲಿ ಇರೋದ್ರಿಂದ ನಾನು ಏನು ಹೇಳಲ್ಲ. ಪತ್ರವನ್ನು ಯಾರಬೇಕಾದರೂ ರಾಜ್ಯಪಾಲರಿಗೆ ಬರೆಯಬಹುದು. ಆದರೆ ಪ್ರಾಮಾಣಿಕವಾಗಿ ಮಾತ್ರ ತನಿಖೆ ನಡೆಯುತ್ತಿದೆ ಎಂದರು.

ಸ್ವಾತಂತ್ರ್ಯ ದಿನದ ಅಂಗವಾಗಿ ಸನ್ನಡತೆ ಆಧಾರದ ಮೇಲೆ 84 ಕೈದಿಗಳನ್ನು ಬಿಡುಗಡೆ ಮಾಡಲಾಗ್ತಿದೆ. ಆಜಾದಿ ಕಾ ಅಮೃತ ಮಹೋತ್ಸವ ದಿನದ ಅಂಗವಾಗಿ ನಮ್ಮ‌ 1 ಲಕ್ಷದ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ತಿರಂಗ ಹಾರಿಸಲಾಗುತ್ತದೆ ಇದೇ ವೇಳೆ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News