ಸಿದ್ದರಾಮಯ್ಯನವರೇ ಈ ನಾಟಕವೆಲ್ಲಾ ಬಿಟ್ಟು ತೆಪ್ಪಗೆ ರಾಜೀನಾಮೆ ಕೊಟ್ಟು ನಿಮ್ಮ ಮರ್ಯಾದೆ ಉಳಿಸಿಕೊಳ್ಳಿ-ಆರ್ ಅಶೋಕ್

'ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು' ಎಂಬ ಕನ್ನಡದ ಗಾದೆ ಮಾತು ಕೇಳಿರಬೇಕಲ್ಲವೇ ಸಿಎಂ ಸಿದ್ದರಾಮಯ್ಯನವರೇ? ಇದು ನಿಮಗೆ ಬಹಳ ಸೂಕ್ತವಾಗಿ ಅನ್ವಯಿಸುತ್ತದೆ.ದಲಿತರ ದೊಡ್ಡು ಹೊಡೆದು ಕಳೆದುಕೊಂಡಿರುವ ಮಾನ ಕನ್ನಡಿಗರ ಮೂಗಿಗೆ ತುಪ್ಪ ಸವರಿದರೆ ವಾಪಸ್ಸು ಬರುತ್ತದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

Written by - Manjunath N | Last Updated : Jul 17, 2024, 04:39 PM IST
  • ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು' ಎಂಬ ಕನ್ನಡದ ಗಾದೆ ಮಾತು ಕೇಳಿರಬೇಕಲ್ಲವೇ ಸಿಎಂ ಸಿದ್ದರಾಮಯ್ಯನವರೇ?
  • ಇದು ನಿಮಗೆ ಬಹಳ ಸೂಕ್ತವಾಗಿ ಅನ್ವಯಿಸುತ್ತದೆ
  • ದಲಿತರ ದೊಡ್ಡು ಹೊಡೆದು ಕಳೆದುಕೊಂಡಿರುವ ಮಾನ ಕನ್ನಡಿಗರ ಮೂಗಿಗೆ ತುಪ್ಪ ಸವರಿದರೆ ವಾಪಸ್ಸು ಬರುತ್ತದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ
ಸಿದ್ದರಾಮಯ್ಯನವರೇ ಈ ನಾಟಕವೆಲ್ಲಾ ಬಿಟ್ಟು ತೆಪ್ಪಗೆ ರಾಜೀನಾಮೆ ಕೊಟ್ಟು ನಿಮ್ಮ ಮರ್ಯಾದೆ ಉಳಿಸಿಕೊಳ್ಳಿ-ಆರ್ ಅಶೋಕ್ title=
file photo

ಬೆಂಗಳೂರು: ನಿಮ್ಮ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ, ವೈಫಲ್ಯಗಳನ್ನ ಮುಚ್ಚಿಕೊಳ್ಳಲು ಸಾಧ್ಯವೇ ಇಲ್ಲ. ನಿಮ್ಮ ಪಾಪದ ಕೊಡ ತುಂಬಿದೆ ಸಿದ್ದರಾಮಯ್ಯನವರೇ, ನಿಮ್ಮ ಮುಖವಾಡ ಕಳಚಿದೆ, ಆಟ ಮುಗಿದಿದೆ.ಈ ನಾಟಕವೆಲ್ಲಾ ಬಿಟ್ಟು ತೆಪ್ಪಗೆ ರಾಜೀನಾಮೆ ಕೊಟ್ಟು ನಿಮ್ಮ ಮರ್ಯಾದೆ ಉಳಿಸಿಕೊಳ್ಳಿ, ರಾಜ್ಯದ ಗೌರವವನ್ನೂ ಉಳಿಸಿ ಎಂದು ಬಿಜೆಪಿ ಹಿರಿಯ ನಾಯಕ ಆರ್ ಆಶೋಕ್ ಪ್ರಶ್ನಿಸಿದ್ದಾರೆ.

'ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು' ಎಂಬ ಕನ್ನಡದ ಗಾದೆ ಮಾತು ಕೇಳಿರಬೇಕಲ್ಲವೇ ಸಿಎಂ ಸಿದ್ದರಾಮಯ್ಯನವರೇ? ಇದು ನಿಮಗೆ ಬಹಳ ಸೂಕ್ತವಾಗಿ ಅನ್ವಯಿಸುತ್ತದೆ.ದಲಿತರ ದೊಡ್ಡು ಹೊಡೆದು ಕಳೆದುಕೊಂಡಿರುವ ಮಾನ ಕನ್ನಡಿಗರ ಮೂಗಿಗೆ ತುಪ್ಪ ಸವರಿದರೆ ವಾಪಸ್ಸು ಬರುತ್ತದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ವಾಲ್ಮೀಕಿ ಹಗರಣದ ಗದ್ದಲ

ದಲಿತರ ದುಡ್ಡು ಹೊಡೆದಿರುವ ಬಗ್ಗೆ ಉತ್ತರ ಕೋಡಿ ಸ್ವಾಮಿ ಅಂದರೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಹೊಸ ನಾಟಕ ಶುರು ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಕರ್ನಾಟಕದ ಜನತೆ ನಿಮ್ಮ ಕುತಂತ್ರಗಳನ್ನ ಅರಿಯದಷ್ಟು ದಡ್ಡರು, ಅಮಾಯಕರು ಎಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಖಾಸಗಿ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ 

ಚುನಾವಣೆ ಬಂದಾಗಲೆಲ್ಲಾ ಅಥವಾ ನಿಮ್ಮ ಸರ್ಕಾರ/ಪಕ್ಷ ಮುಜುಗರಕ್ಕೊಳಗಾದಾಗಲೆಲ್ಲ ಪ್ರತ್ಯೇಕ ಧರ್ಮ, ಪ್ರತ್ಯೇಕ ಧ್ವಜ, ನಂದಿನಿ - ಅಮುಲ್, 'ನನ್ನ ತೆರಿಗೆ ನನ್ನ ಹಕ್ಕು', ಎಂಬ ಇಲ್ಲಸಲ್ಲದ ವಿಚಾರಗಳನ್ನ ಹುಟ್ಟುಹಾಕಿ ಜನರ ಗಮನ ಬೇರೆಡೆ ಸೆಳೆಯುವ ನಿಮ್ಮ ಗೋಸುಂಬೆ ರಾಜಕೀಯ ಕನ್ನಡಿಗರಿಗೆ ಗೊತ್ತಿಲ್ಲ ಎಂಬ ಭ್ರಮೆಯಲ್ಲಿದ್ದೀರಾ? ಎಂದು ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News