ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ: ಪ್ರತಾಪ್ ಸಿಂಹ

ಒಂದು ವೇಳೆ ನಮ್ಮ ಕಾರ್ಯಕರ್ಯರು ಮೈ ಮರೆತರೆ ರಾಜ್ಯದಲ್ಲಿ ಮತ್ತೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಇದಕ್ಕೆ ನಮ್ಮ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಪ್ರತಾಪ್ ಸಿಂಹ ಕರೆ ನೀಡಿದ್ದಾರೆ.

Written by - Puttaraj K Alur | Last Updated : Feb 24, 2023, 02:44 PM IST
  • ಬಿಜೆಪಿ ಕಾರ್ಯಕರ್ತರು ಮೈಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ
  • ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯನವರು ಹವಣಿಸುತ್ತಿದ್ದಾರೆ
  • ಇದಕ್ಕೆ ನಮ್ಮ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದ ಪ್ರತಾಪ್ ಸಿಂಹ
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ: ಪ್ರತಾಪ್ ಸಿಂಹ title=
ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಸ್ವಲ್ಪ ಎಚ್ಚರ ತಪ್ಪಿದ್ರೂ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, ‘ಬಿಜೆಪಿ ಕಾರ್ಯಕರ್ತರು ಮೈ ಮರೆಯಬಾರದು. ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ’ ಅಂತಾ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಇತಿಹಾಸ ಪ್ರಸಿದ್ದ ದೇವಸ್ಥಾನವೇ ಟಾರ್ಗೆಟ್: ಶನಿ ಮಹಾತ್ಮನ ಪೂಜೆಗೆ ಮಾಂಸದ ಹಾರ ತಂದ ಖದೀಮರು

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ರಾಷ್ಟ್ರೀಯವಾದಿ ಸರ್ಕಾರವನ್ನು ತರಲು ಪ್ರಯತ್ನ ಮಾಡಬೇಕು. ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಮದುವೆ, ಮುಂಜಿ, ಬೀಗರ ಕಾರ್ಯಕ್ರಮ ಹೀಗೆ ಅನೇಕ ಸಮಾರಂಭಗಳಿಗೆ ಮೈಸೂರಿಗೆ ಬರುತ್ತಿದ್ದರು. ಆದರೆ ದುಷ್ಕರ್ಮಿಗಳಿಂದ ಹತ್ಯೆಯಾದ ಕ್ಯಾತಮಾರನಹಳ್ಳಿಯ ರಾಜುವಿನ ಮನೆಗೆ ಸೌಜನ್ಯಕ್ಕೂ ಭೇಟಿ ನೀಡಲಿಲ್ಲವೆಂದು ಪ್ರತಾಪ್ ಸಿಂಹ ಕಿಡಿಕಾರಿದರು.

ಪಿಎಫ್ಐ ಮತ್ತು ಕೆಎಫ್‍ಡಿಯ 175 ಸದಸ್ಯರ ಮೇಲಿದ್ದ ಪ್ರಕರಣವನ್ನು ಸಿದ್ದರಾಮಯ್ಯ ವಾಪಸ್ ಪಡೆದರು. ಇದು 2 ಡಜನ್ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯಲು ಕಾರಣವಾಯಿತು. ಈಗ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಹವಣಿಸುತ್ತಿದ್ದಾರೆ. ಒಂದು ವೇಳೆ ನಮ್ಮ ಕಾರ್ಯಕರ್ಯರು ಈ ವೇಳೆ ಮೈ ಮರೆತರೆ ರಾಜ್ಯದಲ್ಲಿ ಮತ್ತೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಇದಕ್ಕೆ ನಮ್ಮ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಪ್ರತಾಪ್ ಸಿಂಹ ಕರೆ ನೀಡಿದ್ದಾರೆ.

ಇದನ್ನೂ ಓದಿ: Congress Guarantee No 3: ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News