ಬಾಡೂಟದ ಬಳಿಕ ದೇವಸ್ಥಾನಕ್ಕೆ ತೆರಳಿದ ಸಿ ಟಿ ರವಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯದಲ್ಲಿಆರೊಪ ಪ್ರತ್ಯಾರೋಪಗಳು ಕೇಳಿ ಬರುವುದು ಸಹಜ. ಅದರಲ್ಲೂ ರಾಜ್ಯದಲ್ಲಿ ಧಾರ್ಮಿಕ ವಿಚಾರಗಳು ಬಹಳ ಬೇಗನೆ ಹರಡಿಕೊಳ್ಳುತ್ತವೆ. ಇದೀಗ ಸಿ.ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ತೆರಳಿದ್ದಾರೆ ಎನ್ನುವುದೇ ಚರ್ಚೆಯ ವಿಷಯವಾಗಿದೆ.
ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸಾಹಾರ ಮಾಡಿ ದೇವಸ್ಥಾನಕ್ಕೆ ತೆರಳಿರುವ ಬಗ್ಗೆ ಸಿದ್ದರಾಮಯ್ಯ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ಮತ್ತು ಬಿಜೆಪಿ ನಾಯಕರನ್ನು ಅಣಕಿಸಿದ್ದಾರೆ. ಪರದೂಷಣೆಯಲ್ಲಿ ನಿರತರಾಗಿರುವ ಸಿಟಿ ರವಿಗೆ ಇನ್ನಾದರೂ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಹೇಳಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯದಲ್ಲಿಆರೊಪ ಪ್ರತ್ಯಾರೋಪಗಳು ಕೇಳಿ ಬರುವುದು ಸಹಜ. ಅದರಲ್ಲೂ ರಾಜ್ಯದಲ್ಲಿ ಧಾರ್ಮಿಕ ವಿಚಾರಗಳು ಬಹಳ ಬೇಗನೆ ಹರಡಿಕೊಳ್ಳುತ್ತವೆ. ಇದೀಗ ಸಿ.ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ತೆರಳಿದ್ದಾರೆ ಎನ್ನುವುದೇ ಚರ್ಚೆಯ ವಿಷಯವಾಗಿದೆ.
ಇದನ್ನೂ ಓದಿ : ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ವಿರಿಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ. ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿ ಟಿ ರವಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದಿದ್ದಾರೆ.
ಇಸ್ಲಾಂಗೆ ಮತಾಂತರಗೊಂಡು ಮದುವೆಯಾಗಿದ್ದ ಯುವತಿಗೆ ಮೋಸ: ಹೆರಿಗೆಗೆ ಕಳಿಸಿ ಮತ್ತೊಬ್ಬಳನ್ನು ವರಿಸಿದ ಭೂಪ.!
ಫೆಬ್ರವರಿ 19 ರಂದು ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಮಾಡಿದ್ದರು. ಬಾಡೂಟದ ಬಳಿಕ ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ನಾಗಬನದ ಬಾಗಿಲು ಹಾಕಿದ್ದರಿಂದ ಗೇಟ್ ಮುಂಭಾಗದಿಂದಲೇ ಸಿ.ಟಿ.ರವಿ ನಮಸ್ಕಾರ ಮಾಡಿ ತೆರಳಿದ್ದರು. ಆದರೆ ನಂತರ ಸಿ ಟಿ ರವಿ ಕರಿಬಂಟ ಹನುಮ ದೇಗುಲಕ್ಕೆ ಕೂಡಾ ಭೇಟಿ ನೀಡಿದ್ದರು. ಶಾಸಕರ ಜೊತೆ ಸಿ.ಟಿ.ರವಿ ಬಾಡೂಟದ ಫೋಟೋ ಮತ್ತು ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿವೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.