ಬೆಂಗಳೂರು : ನಾಡು, ನುಡಿಗೆ ಸಂಬಂಧಿಸಿದಂತೆ ತಮ್ಮದು ರಾಜಿ ಇಲ್ಲದ ನಿಲುವು ಎಂಬುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ತಮ್ಮದೇ ಕಾಂಗ್ರೆಸ್ ಜೊತೆ ಸರ್ಕಾರ ರಚಿಸಿರುವ ಶಿವಸೇನೆಯ ನಾಯಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddav Thackeray) ಬೆಳಗಾವಿ ಬಗ್ಗೆ ಆಡಿರುವ ಮಾತನ್ನು ಅಧಿಕಪ್ರಸಂಗ ಎಂದು ಕರೆದಿದ್ದಾರೆ.


Ramesh Jarkiholi: 'ಬೆಳಗಾವಿ ಗ್ರಾಮೀಣ ಕ್ಷೇತ್ರ ನಂದು, ಅಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ'


COMMERCIAL BREAK
SCROLL TO CONTINUE READING

ಇನ್ನೊಂದು ಟ್ವೀಟ್ ನಲ್ಲಿ 'ಬೆಳಗಾವಿ (Belagavi) ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. @uddhavthackeray ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ. #ಬೆಳಗಾವಿನಮ್ಮದು' ಎಂದು ಸಲಹೆ ನೀಡಿದ್ದಾರೆ. 


ಮತ್ತೊಂದು ಟ್ವೀಟ್ ನಲ್ಲಿ 'ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ @uddhavthackeray ಅವರ ಉದ್ಧಟತನದ ಹೇಳಿಕೆಗೆ @CMofKarnataka ಅವರು, ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು. #ಬೆಳಗಾವಿನಮ್ಮದು' ಎಂದು ಆಗ್ರಹಿಸಿದ್ದಾರೆ. 


ಇದನ್ನೂ ಓದಿ - 'ಬಳ್ಳಾರಿ ವಿಭಜನೆ ಆದಂತೆ ಬೆಳಗಾವಿಯೂ ವಿಭಜನೆ ಆಗಲೇಬೇಕು'


ತಮ್ಮ ನಾಲ್ಕನೇ ಟ್ವೀಟ್ ನಲ್ಲಿ 'ಮಹಾರಾಷ್ಟ್ರ ಮುಖ್ಯಮಂತ್ರಿ  @uddhavthackeray ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ. #ಬೆಳಗಾವಿನಮ್ಮದು' ಎಂದು ಸಿದ್ದರಾಮಯ್ಯ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬುದ್ದಿಮಾತು ಹೇಳಿದ್ದಾರೆ. 
 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.