ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ, ಪ್ರಕೃತಿ ವಿಕೋಪ ಕುರಿತಂತೆ ಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದ ರೈತರು, ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು NDRF ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ 3 ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,18,177 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಿದ್ದರಾಮಯ್ಯನವರು ಕೇಂದ್ರಕ್ಕೆ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಕೇಂದ್ರ ಗೃಹ ಸಚಿವ @AmitShah ಅವರನ್ನು ಭೇಟಿ ಮಾಡಿ, ಪ್ರಕೃತಿ ವಿಕೋಪ ಕುರಿತಂತೆ ಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಒತ್ತಾಯಿಸಿದರು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ… pic.twitter.com/7nk1eQEe86
— CM of Karnataka (@CMofKarnataka) December 20, 2023
ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ರಣತಂತ್ರ
‘ಇದರಲ್ಲಿ 4,663 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ಸಣ್ಣ ಮತ್ತು ಅತಿಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, 83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್ಸ್ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಸಿದ್ದರಾಮಯ್ಯ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ಇದರಲ್ಲಿ 4,663 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ… pic.twitter.com/tn3dP5ohkT— CM of Karnataka (@CMofKarnataka) December 20, 2023
‘ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 2023ರ ಸೆಪ್ಟೆಂಬರ್ 22ರಂದು ಸಲ್ಲಿಸಲಾಗಿತ್ತು. ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ NDRF ಅಡಿ 17,901 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ 12,577 ಕೋಟಿ ರೂ. ಮೊತ್ತವೂ ಸೇರಿದೆ’ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20… pic.twitter.com/RHqgceXuBY
— CM of Karnataka (@CMofKarnataka) December 20, 2023
ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ
ನವೆಂಬರ್ 4ರಂದು ಹೆಚ್ಚುವರಿಯಾಗಿ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಮನವಿ ಸಲ್ಲಿಸಿ ಈಗಾಗಲೇ 3 ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಸಿದ್ದರಾಮಯ್ಯನವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.