Viral Video: ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿ ಸವಾರಿ ಮಾಡಿದ ಸಿದ್ದರಾಮಯ್ಯ..!

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್, ಎಲ್‌ಪಿಜಿ ಸಿಲಿಂಡರ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ದೇಶದ ಜನರನ್ನು ಲೂಟಿ ಮಾಡುತ್ತಿದೆ.

Written by - Zee Kannada News Desk | Last Updated : Sep 20, 2021, 07:38 PM IST
  • ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್ ನಿಂದ ಬೆಂಗಳೂರಿನಲ್ಲಿ ಸೈಕಲ್ ಜಾಥಾ
  • ಸೈಕಲ್ ಸವಾರಿ ಮಾಡಿ ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಮಾಜಿ ಸಿಎಂ ಸಿದ್ದರಾಮಯ್ಯ
  • ಕೂಡಲೇ ಅಬಕಾರಿ ಸುಂಕವನ್ನು ಶೇ.50ರಷ್ಟು ಕಡಿಮೆ ಮಾಡುವಂತೆ ಕೇಂದ್ರಕ್ಕೆ ಸಿದ್ದರಾಮಯ್ಯ ಆಗ್ರಹ
Viral Video: ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿ ಸವಾರಿ ಮಾಡಿದ ಸಿದ್ದರಾಮಯ್ಯ..! title=
ಸೈಕಲ್ ಸವಾರಿ ಮಾಡಿದ ಸಿದ್ದರಾಮಯ್ಯ ಮತ್ತು ಡಿಕೆಶಿ (Photo Courtesy: Twitter/@siddaramaiah)

ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ(Price Hike)ಯನ್ನು ಖಂಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕರು ಇಂದು ಸೈಕಲ್ ಏರಿ ಸವಾರಿ ಮಾಡಿದ್ದಾರೆ.

ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಕಾಂಗ್ರೆಸ್ ಸೋಮವಾರ(ಸೆ.20) ಸೈಕಲ್ ಜಾಥಾ ಆಯೋಜಿಸಿತ್ತು. ಸಿದ್ದರಾಮಯ್ಯ ಮತ್ತು ಡಿಕೆಶಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸೈಕಲ್ ಏರಿ ಸವಾರಿ(Bicycle Ride)ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಆನೇಕಲ್ ಬಳಿ ರೇವ್ ಪಾರ್ಟಿ: ಡ್ರಗ್ಸ್ ನಶೆಯಲ್ಲಿದ್ದ 11 ಮಂದಿ ಬಂಧನ..!

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್(Petrol, Diesel Price), ಎಲ್‌ಪಿಜಿ ಸಿಲಿಂಡರ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ದೇಶದ ಜನರನ್ನು ಲೂಟಿ ಮಾಡುತ್ತಿದೆ. ನಿರಂತರವಾಗಿ ಬೆಲೆ ಏರಿಕೆಯಾಗುತ್ತಿರುವುದರಿಂದ ದೇಶದ ಜನರು ಕಂಗಾಲಾಗಿದ್ದಾರೆ. ಬೆಲೆ ಏರಿಕೆ ಹೆಸರಿನಲ್ಲಿ ಬಿಜೆಪಿ ಸರ್ಕಾರ ದೇಶದ ಜನರನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಈ ವೇಳೆ ಕಿಡಿಕಾರಿದರು.

ಪ್ರಧಾನಿ ಮೋದಿ ಸರ್ಕಾರ(Narendra Modi Govt.)ಡೀಸೆಲ್ ಅಬಕಾರಿ ಸುಂಕವನ್ನು 3.45 ರೂ. ನಿಂದ 31.84 ರೂ. ಮತ್ತು ಪೆಟ್ರೋಲ್‌ನ ಅಬಕಾರಿ ಸುಂಕವನ್ನು 9.21 ರೂ.ನಿಂದ 32.98 ರೂ.ನಷ್ಟು ಏರಿಕೆ ಮಾಡಿದೆ. ಇದು ದೇಶದ ಜನರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದ. ಜೀವನ ನಡೆಸಲು ಜನರು ಕಷ್ಟಪಡುಂತವಾಗಿದೆ. ಹೀಗಾಗಿ ಕೂಡಲೇ ಅಬಕಾರಿ ಸುಂಕವನ್ನು ಶೇ.50ರಷ್ಟು ಕಡಿಮೆ ಮಾಡಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.  

ಇದನ್ನೂ ಓದಿ: ಕೌಟುಂಬಿಕ ಕಲಹ?: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ..!

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾನ್ಯ ಜನರನ್ನು ಲೂಟಿ ಮಾಡುತ್ತಿವೆ. ನರೇಂದ್ರ ಮೋದಿ(Narendra Modi) ಆಡಳಿತಾವಧಿಯಲ್ಲಿ ಕಚ್ಚಾ ತೈಲ ಬೆಲೆ ತೀವ್ರವಾಗಿ ಕಡಿಮೆಯಾಗಿದೆ. ಆದರೆ ಸಾಮಾನ್ಯ ಜನರಿಗೆ ಹೊರೆಯಾಗುವಂತೆ ಅಬಕಾರಿ ಸುಂಕವನ್ನು ಹೆಚ್ಚಿಸಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಯಾವುದೇ ಬಿಜೆಪಿ ನಾಯಕರೂ ಬಿಜೆಪಿಯನ್ನು ಕಾಪಾಡಲು ಸಾಧ್ಯವಿಲ್ಲ. ಪೆಟ್ರೋಲ್ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಗಳ ತೀವ್ರ ಏರಿಕೆಯಿಂದ ಜನರು ನಿರಾಶೆಗೊಂಡಿದ್ದಾರೆ. ಪ್ರಸ್ತುತ ಸರ್ಕಾರದ ಅವಧಿ ಯಾವಾಗ ಮುಗಿಯುತ್ತದೋ ಎಂದು ಅವರು ಕಾಯುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜನರು ತಕ್ಕಪಾಠ ಕಲಿಸುವುದು ಗ್ಯಾರೆಂಟಿ’ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News