ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ(Price Hike)ಯನ್ನು ಖಂಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕರು ಇಂದು ಸೈಕಲ್ ಏರಿ ಸವಾರಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಕಾಂಗ್ರೆಸ್ ಸೋಮವಾರ(ಸೆ.20) ಸೈಕಲ್ ಜಾಥಾ ಆಯೋಜಿಸಿತ್ತು. ಸಿದ್ದರಾಮಯ್ಯ ಮತ್ತು ಡಿಕೆಶಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸೈಕಲ್ ಏರಿ ಸವಾರಿ(Bicycle Ride)ಮಾಡುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಆನೇಕಲ್ ಬಳಿ ರೇವ್ ಪಾರ್ಟಿ: ಡ್ರಗ್ಸ್ ನಶೆಯಲ್ಲಿದ್ದ 11 ಮಂದಿ ಬಂಧನ..!


ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್(Petrol, Diesel Price), ಎಲ್‌ಪಿಜಿ ಸಿಲಿಂಡರ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ದೇಶದ ಜನರನ್ನು ಲೂಟಿ ಮಾಡುತ್ತಿದೆ. ನಿರಂತರವಾಗಿ ಬೆಲೆ ಏರಿಕೆಯಾಗುತ್ತಿರುವುದರಿಂದ ದೇಶದ ಜನರು ಕಂಗಾಲಾಗಿದ್ದಾರೆ. ಬೆಲೆ ಏರಿಕೆ ಹೆಸರಿನಲ್ಲಿ ಬಿಜೆಪಿ ಸರ್ಕಾರ ದೇಶದ ಜನರನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಈ ವೇಳೆ ಕಿಡಿಕಾರಿದರು.


Narendra Modi Govt.)ಡೀಸೆಲ್ ಅಬಕಾರಿ ಸುಂಕವನ್ನು 3.45 ರೂ. ನಿಂದ 31.84 ರೂ. ಮತ್ತು ಪೆಟ್ರೋಲ್‌ನ ಅಬಕಾರಿ ಸುಂಕವನ್ನು 9.21 ರೂ.ನಿಂದ 32.98 ರೂ.ನಷ್ಟು ಏರಿಕೆ ಮಾಡಿದೆ. ಇದು ದೇಶದ ಜನರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದ. ಜೀವನ ನಡೆಸಲು ಜನರು ಕಷ್ಟಪಡುಂತವಾಗಿದೆ. ಹೀಗಾಗಿ ಕೂಡಲೇ ಅಬಕಾರಿ ಸುಂಕವನ್ನು ಶೇ.50ರಷ್ಟು ಕಡಿಮೆ ಮಾಡಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.  


ಇದನ್ನೂ ಓದಿ: ಕೌಟುಂಬಿಕ ಕಲಹ?: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ..!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.