ಮೈಸೂರು: ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ವಿಚಾರವಾಗಲಿ. ಇನ್ಮುಂದೆ ಜೆಡಿಎಸ್ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಭವಿಷ್ಯದಲ್ಲಿ ಯಾವುದೇ ಚುನಾವಣೆಯಲ್ಲೂ ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರು ಪಾಲಿಕೆಯಂತೆಯೇ ಮೈಮುಲ್‌ನಲ್ಲೂ ಕಾಂಗ್ರೆಸ್-ಜೆಡಿಎಸ್(Congress-JDS) ಮೈತ್ರಿ ಕುರಿತ ಪ್ರಶ್ನೆಗೆ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಆಗುವುದಿಲ್ಲ. ಎಲ್ಲರೂ ಸ್ವತಂತ್ರವಾಗಿ ಸ್ಪರ್ಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
CD Case: 'ಯುವತಿಗೆ ಅನ್ಯಾಯವಾಗಿದ್ದರೆ ಹೊರಬಂದು ದೂರು ನೀಡಲಿ'
ಭೂ ಸುಧಾರಣೆ ತಿದ್ದುಪಡಿ ಕಾಯಿದೆ ಅನ್ವಯ ಬಡವರಿಗೆ ಸರ್ಕಾರವೇ ನೀಡಿದ್ದ ಜಮೀನನ್ನು ವಾಪಸ್ಸು ಪಡೆಯುತ್ತಿರುವುದರ ಬಗ್ಗೆ ನಾವೇನು ಮೌನ ವಹಿಸಿಲ್ಲ. ಈ ಬಗ್ಗೆ ರಾಜ್ಯಾದ್ಯಂತ ಮಾಹಿತಿ ಕಲೆ ಹಾಕುತ್ತಿದ್ದು, ಗಂಭೀರವಾಗಿ ಪರಿಗಣಿಸಿ ವಿಧಾನಸಭೆ ಕಲಾಪದಲ್ಲಿ ಮತ್ತು ಸಾರ್ವಜನಿಕವಾಗಿ ಧ್ವನಿ ಎತ್ತುತ್ತೇವೆ. ಬಿಜೆಪಿ(BJP) ಸರ್ಕಾರ ಸಾಮಾಜಿಕ ನ್ಯಾಯದ ವಿರುದ್ಧ ಇರುವುದರಿಂದಲೇ ಇಂತಹ ಕ್ರಮಕ್ಕೆ ಮುಂದಾಗಿದೆ ಎಂದರು.
FactCheck: ಕೊರೊನಾ ಭೀತಿ ಹಿನ್ನಲೆಯಲ್ಲಿ ಕಾಲೇಜುಗಳಿಗೆ ಮತ್ತೆ ರಜೆ ಘೋಷಿಸಿದೆಯೇ ಸರ್ಕಾರ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.