ಚಿಕ್ಕಮಗಳೂರು: ಬಿಜೆಪಿಯವರು ಸ್ವರ್ಗ ಸೃಷ್ಟಿ ಮಾಡ್ತೀವಿ ಅಂತ ಹೇಳಿ ದೇಶವನ್ನು ನರಕ ಮಾಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾತ್ಮ ಗಾಂಧಿಯವರ ಸಮಾಧಿಸ್ಥಳ ರಾಜ್‌ಘಾಟ್‌ಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಕಣ್ಣೆದುರೇ ಗೂಂಡಾ ಒಬ್ಬ ಗುಂಡು ಹಾರಿಸಿದ್ರೂ ಪೊಲೀಸರು ಮೌನವಾಗಿದ್ರು. ಗೂಂಡಾವೊಬ್ಬನಿಗೆ ಇಷ್ಟು ಧೈರ್ಯ ಬರಲು ಹೇಗೆ ಸಾಧ್ಯ? ಇದಕ್ಕೆ ಯಾರ ಬೆಂಬಲವಿದೆ?  ಸಮಾಜಘಾತುಕರು, ಗೂಂಡಾಗಳೆಲ್ಲ ದೇಶಪ್ರೇಮದ ಸೋಗಿನಲ್ಲಿ ಅಮಾಯಕರ ಹತ್ಯೆಗೆ ನಿಂತಿದ್ದಾರೆ. ಇಂಥ ಹತ್ಯೆಗಳಿಗೆ ಸರ್ಕಾರವೂ ಬೆಂಬಲಿಸುತ್ತಿರುವುದು ದೇಶದ ಕರಾಳ ದಿನಗಳನ್ನು ಖಾತ್ರಿಪಡಿಸುತ್ತಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಪುರಾವೆ ಬೇಕೆ? ಎಂದು ಪ್ರಶ್ನಿಸಿದ್ದಾರೆ.
 
ಚಿಕ್ಕಮಗಳೂರಿನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಭಾಪತಿಗಳು ನಿಯಮಗಳ ಪ್ರಕಾರ ಸದನವನ್ನು ನಡೆಸಬೇಕು. ಸನ್ನಿವೇಶ ಯಾವ ರೀತಿ ಸೃಷ್ಟಿಯಾಗುತ್ತದೆ ಎಂದು ತಿಳಿಯುವುದಿಲ್ಲ. ನಾವು ಎಲ್ಲಾ ಸಂದರ್ಭದಲ್ಲೂ ಪ್ರತಿಭಟಿಸುವುದಿಲ್ಲ. ಆಕ್ಷೇಪಾರ್ಹ ವಿಚಾರಗಳಿದ್ದಾಗ ಪ್ರತಿಭಟನೆ ಅನಿವಾರ್ಯ. ಆದರೆ ಅಮಾನತುಗೊಳಿಸುತ್ತೇವೆ ಎಂಬುದು  ಪ್ರಜಾಪ್ರಭುತ್ವ ವಿರೋಧಿ ವರ್ತನೆ. ನಾವೆಲ್ಲರೂ ಶಾಸಕರಾಗಿ ವಿಧಾನಸಭೆಗೆ ಬರುವುದು ಜನರ ಪ್ರತಿನಿಧಿಗಳಾಗಿ, ನಾವು ವಿಧಾನಸಭೆಯಲ್ಲಿ ಅವರ ಧ್ವನಿಯಾಗಿ ಕೆಲಸ ಮಾಡಬೇಕು. ನಾವೆಲ್ಲರೂ ನಮ್ಮ ಕ್ಷೇತ್ರದ ಸಮಸ್ಯೆಗಳು, ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು.


COMMERCIAL BREAK
SCROLL TO CONTINUE READING

ರಾಜ್ಯಪಾಲರ ಭಾಷಣವನ್ನು ಸುಮ್ಮನೆ ವಿರೋಧಿಸುವುದಿಲ್ಲ. ರಾಜ್ಯಪಾಲರ ಭಾಷಣ ನಾಡಿನ ಮತ್ತು ಜನತೆಯ ಹಿತಾಸಕ್ತಿಯ ಪರವಾಗಿ ಇದ್ದರೆ ನಾವು ಪ್ರತಿಭಟಿಸುವಂತಹ ಪ್ರಮೇಯವೇ ಬರುವುದಿಲ್ಲ. ಭಾಷಣದಲ್ಲಿ ಆಕ್ಷೇಪಾರ್ಹ ವಿಚಾರಗಳು ಇದ್ದರೆ ಖಂಡಿತಾ ವಿರೋಧಿಸುತ್ತೇವೆ, ಆಗ ನಮ್ಮ ಬಾಯಿ ಮುಚ್ಚಿಸೋಕೆ ಸಾಧ್ಯವಿಲ್ಲ ಎಂದರು.


ಕಳೆದ ಬಾರಿ ಕೇಂದ್ರದ ಬಜೆಟ್ ಗಾತ್ರ ರೂ.27 ಲಕ್ಷ ಕೋಟಿಯಾಗಿತ್ತು, ಅದರಲ್ಲಿ ಎಷ್ಟು ಹಣ ಬಿಡುಗಡೆಯಾಗಿದೆ, ಎಷ್ಟು ಹಣ ಖರ್ಚಾಗಿದೆ ಎಂಬುದು ನಾಳೆ ತಿಳಿಯುತ್ತೆ. 6 ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಭರವಸೆ ಎಲ್ಲವೂ ಈಡೇರಿದ್ದರೆ ಈಗಾಗಲೇ ಸ್ವರ್ಗ ಸೃಷ್ಟಿಯಾಗಿರಬೇಕಿತ್ತು ಎಂದು ವ್ಯಂಗ್ಯವಾಡಿದರು.


ದೇಶವನ್ನು ನರಕ ಮಾಡಿದ್ದಾರೆ; ಬಿಜೆಪಿ ನಾಯಕರ ವಿರುದ್ಧ ಸಿದ್ದು ಗುಡುಗು!
ಬಿಜೆಪಿಯವರು ಸ್ವರ್ಗ ಸೃಷ್ಟಿ ಮಾಡ್ತೀವಿ ಅಂತ ಹೇಳಿ ದೇಶವನ್ನು ನರಕ ಮಾಡಿದ್ದಾರೆ. ದೇಶದ ನಿರುದ್ಯೋಗ ಸಮಸ್ಯೆ, ಹಸಿವು, ಜಿಡಿಪಿ ಕುಸಿತ, ಭ್ರಷ್ಟಾಚಾರದ ಹೆಚ್ಚಳ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಉತ್ಪಾದನೆ ಕುಸಿತ, ಇಳಿಕೆಯಾಗುತ್ತಿರುವ ರಫ್ತು ಪ್ರಮಾಣದ ಬಗ್ಗೆ ಮಾತನಾಡಲಿ. ದೇಶದ ಈ ದುಸ್ಥಿತಿಗೆ ಕಾರಣ ಯಾರು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.


'ಈಶ್ವರ್ ಅಲ್ಲಾ ತೇರೆ ನಾಮ್ ಸಬ್‌ಕೋ ಸನ್ಮತಿ ದೇ ಭಗವಾನ್' ಎಂದು ಸೌಹಾರ್ದತೆ ಸಾರಿದ ಕಾರಣಕ್ಕಾಗಿ ಮಹಾತ್ಮ ಗಾಂಧಿಯವರನ್ನು ಸಂಘಪರಿವಾರ ಗುಂಡಿಟ್ಟು ಕೊಂದಿತ್ತು ಎಂದು RSS ವಿರುದ್ಧ ವಾಗ್ಧಾಳಿ ನಡೆಸಿದ ಸಿದ್ದರಾಮಯ್ಯ, ಈಗ ಅದೇ ಸಂಘಟನೆಗೆ ಸೇರಿದ ಗೂಂಡಾ ಒಬ್ಬ ಜಾಮಿಯಾ ವಿಶ್ವವಿದ್ಯಾಲಯದ ಮೌನ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾನೆ.
ಸೌಹಾರ್ದತೆ ಎಂದರೆ ಬಿಜೆಪಿಗೆ ಏಕಿಷ್ಟು ಭಯ? ಎಂದು ಕೇಳಿದರು.