ಬೆಂಗಳೂರು: ‘75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಪ್ರಯುಕ್ತ ರಾಜ್ಯ ಬಿಜೆಪಿ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಪಂಡಿತ್ ಜವಹರಲಾಲ್ ನೆಹರು ಫೋಟೊ ಕೈಬಿಟ್ಟಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?’ ಎಂದು ಕಿಡಿಕಾರಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?
1/7 pic.twitter.com/9pfTJgpOJK— Siddaramaiah (@siddaramaiah) August 14, 2022
‘ಬಸವರಾಜ್ ಬೊಮ್ಮಾಯಿಯವರೇ ಪಂಡಿತ ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ’ವೆಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಇದನ್ನೂ ಓದಿ: Shocking News: ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಸೀಳಿ ಹತ್ಯೆಗೈದ ಪತಿ!
‘RSS ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರು ಅವರ ಬಗ್ಗೆ RSS ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ ಬೊಮ್ಮಾಯಿಯವರೇ? ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ’ ಎಂದು ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಗುದ್ದು ನೀಡಿದ್ದಾರೆ.
ಸನ್ಮಾನ್ಯ @BSBommai ಅವರೇ ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ.
2/7 pic.twitter.com/W8zYXyM9b4— Siddaramaiah (@siddaramaiah) August 14, 2022
‘ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ 2 ಬಾರಿ (1921 ಮತ್ತು 1931) ಜೈಲುಶಿಕ್ಷೆ ಅನುಭವಿಸಿದ್ದ RSS ಸಂಸ್ಥಾಪಕ ಕೆ.ಬಿ.ಹೆಡಗೆವಾರ್ ಅವರ ಚಿತ್ರವನ್ನು ಯಾಕೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದೀರಿ ಬೊಮ್ಮಾಯಿಯವರೇ? ತ್ರಿವರ್ಣ ಧ್ವಜವನ್ನು ತಿರಸ್ಕರಿಸಿದ್ದ ಅವರ ಬಂಡವಾಳ ಬಯಲಾಗಬಹುದೆಂಬ ಭಯವೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
‘ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ‘ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ’ವೆಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಆರ್ ಎಸ್ ಎಸ್ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರ್ ಎಸ್ ಎಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ @BSBommai?
3/7 pic.twitter.com/w7RNkVakqY— Siddaramaiah (@siddaramaiah) August 14, 2022
ಇದನ್ನೂ ಓದಿ: ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಖಾಕಿ ಸರ್ವ ಸನ್ನದ್ಧ: ಈ ಬಾರಿ ಎಲ್ಲೆಲ್ಲೂ ಪೊಲೀಸರ ಹದ್ದಿನ ಕಣ್ಣು
‘ಬೊಮ್ಮಾಯಿಯವರೇ ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಪಂಡಿತ ಜವಾಹರಲಾಲ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ಮೊದಲು ರಾಜ್ಯದ ಜನತೆಯ ಕ್ಷಮೆ ಕೇಳಿ’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ಎರಡು ಬಾರಿ (1921 ಮತ್ತು 1931) ಜೈಲುಶಿಕ್ಷೆ ಅನುಭವಿಸಿದ್ದ ಆರ್ ಎಸ್ ಎಸ್ ಸಂಸ್ಥಾಪಕ ಕೆ.ಬಿ.ಹೆಡಗೆವಾರ್ ಅವರ ಚಿತ್ರವನ್ನು ಯಾಕೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದೀರಿ @BSBommai ಅವರೇ? ತ್ರಿವರ್ಣ ಧ್ವಜವನ್ನು ತಿರಸ್ಕರಿಸಿದ್ದ ಅವರ ಬಂಡವಾಳ ಬಯಲಾಗಬಹುದೆಂಬ ಭಯವೇ?
5/7 pic.twitter.com/G18GVp3bNn— Siddaramaiah (@siddaramaiah) August 14, 2022
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.