ಬೆಂಗಳೂರು: ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿದ್ದ ಸುದೀಪ್ ಹೇಳಿಕೆ ಪ್ರತಿಕ್ರಿಯಿಸುತ್ತಾ ಹಿಂದಿ ನಟ ಅಜಯ್ ದೇವಗನ್ 'ಬ್ರದರ್ ಕಿಚ್ಚ ಸುದೀಪ್, ನಿಮ್ಮ ಪ್ರಕಾರ ಹಿಂದಿ ರಾಷ್ಟ್ರೀಯ ಭಾಷೆಯಲ್ಲ ಎಂದು ಹೇಳುತ್ತಿದ್ದೀರಿ. ಹಾಗಿದ್ದಲ್ಲಿ ನಿಮ್ಮ ಮಾತೃಭಾಷೆಯಲ್ಲಿ ನಿರ್ಮಾಣ ಮಾಡಿರುವ ಚಿತ್ರಗಳನ್ನೇಕೆ ಹಿಂದಿಯಲ್ಲಿ ಡಬ್ ಮಾಡಿ ಬಿಡುಗಡೆ ಮಾಡುತ್ತಿದ್ದೀರಿ? ಹಿಂದಿ ನಮ್ಮ ಮಾತೃಭಾಷೆ ಹಾಗೂ ಬಹುಶಃ ಮುಂದೆಯೂ ಕೂಡ ಇದು ನಮ್ಮ ರಾಷ್ಟ್ರಭಾಷೆಯಾಗಿಯೇ ಇರಲಿದೆ. ಜನ ಗಣ ಮನ' ಎಂದು ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: Kiccha Sudeep : ಅಜಯ್ ದೇವಗನ್ ಗೆ ಬೆವರಿಳಿಸಿದ ಕಿಚ್ಚ ಸುದೀಪ್
ಈಗ ಅಜೇಯ್ ದೇವಗನ್ ಅವರ ಈ ಟ್ವೀಟ್ ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ವಿಧಾನಸಭಾ ವಿಪಕ್ಷದ ನಾಯಕ ಸಿದ್ಧರಾಮಯ್ಯ 'ಹಿಂದಿ ಎಂದಿಗೂ ನಮ್ಮ ರಾಷ್ಟ್ರೀಯ ಭಾಷೆಯಾಗುವುದಿಲ್ಲ. ನಮ್ಮ ದೇಶದ ಭಾಷಾ ವೈವಿಧ್ಯತೆಯನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.ಪ್ರತಿಯೊಂದು ಭಾಷೆಯು ತನ್ನದೇ ಆದ ಶ್ರೀಮಂತ ಇತಿಹಾಸವನ್ನು ಹೊಂದಿದೆ, ಅದರ ಜನರು ಹೆಮ್ಮೆಪಡುತ್ತಾರೆ.ನಾನೊಬ್ಬ ಕನ್ನಡಿಗ ಎಂದು ಹೆಮ್ಮೆ ಪಡುತ್ತೇನೆ!! ಎಂದು ಪ್ರತಿಕ್ರಿಯಿಸಿದ್ದಾರೆ.
Hindi was never & will never be our National Language.
It is the duty of every Indian to respect linguistic diversity of our Country.
Each language has its own rich history for its people to be proud of.
I am proud to be a Kannadiga!! https://t.co/SmT2gsfkgO
— Siddaramaiah (@siddaramaiah) April 27, 2022
ಅಜಯ್ ದೇವಗನ್ ಅವರ ಹೇಳಿಕೆ ಈಗ ತೀವ್ರ ಟೀಕೆ ವ್ಯಕ್ತವಾಗಿದ್ದು ಎಚ್,ಡಿ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ಆಕ್ರೋಶವ್ಯಕ್ತಪಡಿಸಿದ್ದರು. 'ಚಿತ್ರನಟ ಕಿಚ್ಚ ಸುದೀಪ್ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ.ನಟ ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ' ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: 'ನಿಮಗೆ ನಾನು ಕನ್ನಡದಲ್ಲಿ ಪ್ರತಿಕ್ರಿಯಿಸಿದ್ದರೆ ಹೇಗಿರ್ತಿತ್ತು....! ಅಜಯ್ ದೇವಗನ್ ಗೆ ತಿರುಗೇಟು ನೀಡಿದ ಕಿಚ್ಚ ಸುದೀಪ್
No- Hindi is not our national language. @ajaydevgn Your ignorance is baffling. And it’s great that films like KGF Pushpa and RRR have done so well in the Hindi belt- art has no language barrier.
Please enjoy our films as much as we enjoy yours- #stopHindiImposition https://t.co/60F6AyFeW3— Divya Spandana/Ramya (@divyaspandana) April 27, 2022
ಇನ್ನೊಂದೆಡೆಗೆ ನಟಿ ರಮ್ಯಾ ಕೂಡ ಅಜೇಯ್ ದೇವಗನ್ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸುತ್ತಾ ಇಲ್ಲ- ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ.ಅಜೇಯ್ ದೇವಗನ್ ನಿಮ್ಮ ಅಜ್ಞಾನವು ವಿಸ್ಮಯಕಾರಿಯಾಗಿದೆ. ಮತ್ತು ಕೆಜಿಎಫ್ ಪುಷ್ಪ ಮತ್ತು ಆರ್ಆರ್ಆರ್ನಂತಹ ಚಲನಚಿತ್ರಗಳು ಹಿಂದಿ ಬೆಲ್ಟ್ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವುದು ಅದ್ಭುತವಾಗಿದೆ- ಕಲೆಗೆ ಯಾವುದೇ ಭಾಷೆಯ ತಡೆ ಇಲ್ಲ.ದಯವಿಟ್ಟು ನಿಮ್ಮ ಸಿನಿಮಾಗಳನ್ನು ನಾವು ಆನಂದಿಸುವಷ್ಟು ನೀವು ಕೂಡ ನೋಡಿ ಆನಂದಿಸಿ" ಎಂದು ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.