ಬೆಂಗಳೂರು: ಮಾರುತಿ ಮಾನ್ಪಡೆ ಅವರ ಸಾವಿಗೆ ನಾನು ಮತ್ತು ಡಿ.ಕೆ.ಶಿವಕುಮಾರ್ ಕಾರಣ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿರುವುದು ಬಾಲಿಶತನದ ಹೇಳಿಕೆ ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

ಹಾಗಿದ್ದರೆ ದೇಶದಲ್ಲಿ ಒಂದು ಕಾಲು ಲಕ್ಷ ಜನ ಕೊರೊನಾಕ್ಕೆ ಬಲಿಯಾಗಿದ್ದಾರಲ್ಲಾ ಅದಕ್ಕೆ ಯಾರು ಹೊಣೆ ಎಂದು ಹೇಳುವಿರಾ ಸದಾನಂದ ಗೌಡರೇ? ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.


ಇದೊಂದು ಪಂಚೇಂದ್ರಿಯವನ್ನು ಕಳೆದುಕೊಂಡು ಮರಗಟ್ಟಿ ಹೋಗಿರುವ ಸರ್ಕಾರ- ಸಿದ್ಧರಾಮಯ್ಯ ವಾಗ್ದಾಳಿ


ಕೊರೊನಾ ವಿರುದ್ಧ ಹೋರಾಡಬೇಕಾಗಿದ್ದ ಕೇಂದ್ರ ಸರ್ಕಾರ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಜನವಿರೋಧಿ ಕಾನೂನುಗಳನ್ನು ಜಾರಿಗೆ ತಂದದ್ದೇ ಮಾನ್ಪಡೆಯವರೂ ಸೇರಿದಂತೆ ಅನೇಕ ಹೋರಾಟಗಾರರ ಸಾವಿಗೆ ಕಾರಣ ಎಂದು ಹೇಳಿದರು.


ರಾಜ್ಯಕ್ಕೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್ ನಿಮಗಿದೆಯೇ ಕಟೀಲ್ ಅವರೇ? -ಸಿದ್ಧು ಪ್ರಶ್ನೆ

ಕೆ.ಆರ್ ಪೇಟೆಯಲ್ಲಿ ಹಣ ಹಂಚಿ ಗೆದ್ದಂತೆ ಶಿರಾ ಮತ್ತು ಆರ್.ಆರ್ ನಗರದಲ್ಲೂ ಹಣ ಹಂಚಿ ಸುಲಭದಲ್ಲಿ ಗೆಲ್ಲಬಹುದು ಎಂಬುದು ಬಿಜೆಪಿಯವರ ಲೆಕ್ಕಾಚಾರ. ಆದರೆ ಇಲ್ಲಿನ ಜನ ಹಣದ ಆಮಿಷಕ್ಕೆ ಒಳಗಾಗದೆ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.