ಬೆಂಗಳೂರು: ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

ಬಿಜೆಪಿ ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸೈಕಲ್, ಶೂ, ಸಾಕ್ಸ್ ನೀಡದೆ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


CCTV Footage: ಖ್ಯಾತ ಜೋತಿಷ್ಯಾಚಾರ್ಯ ಚಂದ್ರಶೇಖರ್ ಹತ್ಯೆ, ಇಲ್ಲಿದೆ ಹಂತಕರ CCTV ಫೂಟೇಜ್


‘ಇಂದಿನ ದಿನದವರೆಗೆ ಶಾಲಾ ಮಕ್ಕಳಿಗೆ ನೀಡಬೇಕಾಗಿದ್ದ ಪಠ್ಯಪುಸ್ತಕಗಳ ಬಗ್ಗೆ ಖಚಿತ ತೀರ್ಮಾನವನ್ನು ಕೈಗೊಳ್ಳಲು ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕೆಲವು ಶಾಲೆಗಳಿಗೆ ಹಳೆಯ ಪಠ್ಯ, ಇನ್ನು ಕೆಲವು ಶಾಲೆಗಳಿಗೆ ಹೊಸ ಪಠ್ಯ, ಉಳಿದ ಶಾಲೆಗಳಿಗೆ ಪಠ್ಯವೇ ಇಲ್ಲದಂತಹ ದುಸ್ಥಿತಿ ಇದೆ. ಕೊರೊನಾ ಕಾಲದ ಕಲಿಕಾ ಅಂತರವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ "ವಿದ್ಯಾಪ್ರವೇಶ" ಮತ್ತು "ಕಲಿಕಾ ಚೇತರಿಕೆ" ಎಂಬ 2 ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಇದಕ್ಕೆ ಸಂಬಂಧಿಸಿದ ಕಲಿಕಾ ಹಾಳೆಗಳನ್ನು ಪೂರೈಸಲು ಬಿಜೆಪಿ ಸರ್ಕಾರದಲ್ಲಿ ದುಡ್ಡಿಲ್ಲ’ವೆಂದು ಸಿದ್ದರಾಮಯ್ಯ ಕುಟುಕಿದ್ದಾರೆ.


‘ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಿರುವ ಕಲಿಕಾ ಹಾಳೆಗಳನ್ನು ಶಿಕ್ಷಕರು ಸ್ವಂತ ಖರ್ಚಿನಿಂದ ಡೌನ್‍ಲೋಡ್ ಮಾಡಿಕೊಂಡು, ಜೆರಾಕ್ಸ್ ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇಷ್ಟೊಂದು ಗತಿಗೇಡಿನ ಸರ್ಕಾರ ಹಿಂದೆ ಇರಲಿಲ್ಲ, ಮಂದೆ ಬರಲಾರದು’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.


PSI Recruitment Scam: ಸಿಎಂ ಬೊಮ್ಮಾಯಿ, ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ


ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ