ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು: ಸಿದ್ದರಾಮಯ್ಯ

ಮಂದಿರ, ಮಸೀದಿ, ಚರ್ಚು ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ. ಇದರಿಂದ ಇಷ್ಟುದಿನ ಯಾರಿಗೆ ತೊಂದರೆ ಆಗಿತ್ತು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Zee Kannada News Desk | Last Updated : Apr 5, 2022, 05:08 PM IST
  • ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಸರ್ಕಾರ ಸಮಾಜದ ಕೋಮು ಸಾಮರಸ್ಯ ಕದಡುತ್ತಿದೆ
  • ರಾಜಕೀಯ ಲಾಭ ಪಡೆಯುವ ಹವಣಿಕೆಯಲ್ಲರುವ ಬಿಜೆಪಿಗೆ ಈ ಲೆಕ್ಕಾಚಾರವೇ ತಿರುಗುಬಾಣವಾಗಲಿದೆ
  • ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗದಷ್ಟು ಸಿಎಂ ಬೊಮ್ಮಾಯಿ ಅಸಮರ್ಥರೇ?
ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು: ಸಿದ್ದರಾಮಯ್ಯ title=
ಸಿಎಂ ಬೊಮ್ಮಾಯಿ ಅಸಮರ್ಥರೇ?

ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕ ವಿವಾದ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ್ದಾರೆ.

#ಸೌಹಾರ್ದತೆ ಹ್ಯಾಶ್ ಟ್ಯಾಗ್ ಬಳಸಿ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ(BJP Government) ಸಮಾಜದ ಕೋಮು ಸಾಮರಸ್ಯ ಕದಡುವಂತಹ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಾ, ಆ ಮೂಲಕ ರಾಜಕೀಯ ಲಾಭ ಪಡೆಯುವ ಹವಣಿಕೆಯಲ್ಲಿದೆ. ಈ ಲೆಕ್ಕಾಚಾರವೇ ಮುಂದೆ ಬಿಜೆಪಿಗೆ ತಿರುಗುಬಾಣವಾಗಲಿದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Vatal Nagaraj : ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್

‘ಮಂದಿರ, ಮಸೀದಿ, ಚರ್ಚು ಎಲ್ಲಾ ಕಡೆ ಧ್ವನಿ ವರ್ಧಕ(Loudspeakers Ban)ಗಳನ್ನು ಹಾಕುತ್ತಾರೆ. ಇದರಿಂದ ಇಷ್ಟುದಿನ ಯಾರಿಗೆ ತೊಂದರೆ ಆಗಿತ್ತು? ಕಣ್ಣೆದುರೇ ಸಮಾಜದ ಸಾಮರಸ್ಯ ಕುಸಿದುಬೀಳುತ್ತಿದ್ದರೂ, ಅದಕ್ಕೆ ಕಾರಣವಾದ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗದಷ್ಟು ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ಅಸಮರ್ಥರೇ?’ ಎಂದು ಪ್ರಶ್ನಿಸಿದ್ದಾರೆ.

‘ದಿನೇ ದಿನೆ ರಾಜ್ಯದಲ್ಲಿ ಇಷ್ಟೊಂದು ಅಶಾಂತಿ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಈ ಬಗ್ಗೆ ಮಾತನಾಡದ ಮುಖ್ಯಮಂತ್ರಿ ಬೊಮ್ಮಾಯಿ(Basavaraj Bommai) ಅವರದು ಈ ಎಲ್ಲಾ ಸಮಾಜ ವಿರೋಧಿ ಕೃತ್ಯಗಳಿಗೆ ಸಹಮತವೋ ಅಥವಾ ಕಾನೂನು ಕ್ರಮ ಜರುಗಿಸಲಾಗದ ಅಸಹಾಯಕತೆಯೋ?’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Congress MLA : 'ಹಿಜಾಬ್ ಆಯ್ತು, ಹಲಾಲ್ ಆಯ್ತು, ಇದೀಗ ಮಸೀದಿಗಳ ಮೇಲೆ ಸರ್ಕಾರದ ಕಣ್ಣು ಬಿದ್ದಿದೆ'

‘ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ರಾಜ್ಯದ ಹಿತಾಸಕ್ತಿ ಮತ್ತು ಜನರ ಭವಿಷ್ಯದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗುವ ಮುನ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು’ ಎಂದು ಸಿದ್ದರಾಮಯ್ಯ(Siddaramaiah) ಟ್ವೀಟ್ ಮಾಡಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News