ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ದುರುದ್ದೇಶದಿಂದಲೇ ಜೆಡಿಎಸ್ ಪಕ್ಷ ಆಯ್ದ ಚುನಾವಣಾ ಕ್ಷೇತ್ರ(Karnataka Byelections)ದಲ್ಲಿ ಮಾತ್ರ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುತ್ತದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬಸವಕಲ್ಯಾಣದಲ್ಲಿಯೂ ಜೆಡಿಎಸ್ ನವರು ಹೀಗೆಯೇ ಮಾಡಿದ್ದರು, ಈಗ ಸಿಂದಗಿಯಲ್ಲಿಯೂ ಇದನ್ನೇ ಮಾಡಿದ್ದಾರೆ’ ಅಂತಾ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ದುರುದ್ದೇಶದಿಂದಲೇ ಜೆಡಿಎಸ್ ಪಕ್ಷ ಆಯ್ದ ಚುನಾವಣಾ ಕ್ಷೇತ್ರದಲ್ಲಿ ಮಾತ್ರ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುತ್ತದೆ. ಬಸವಕಲ್ಯಾಣದಲ್ಲಿ ಹೀಗೆಯೇ ಮಾಡಿದ್ದರು, ಈಗ ಸಿಂದಗಿಯಲ್ಲಿಯೂ ಇದನ್ನೇ ಮಾಡಿದ್ದಾರೆ. 1/5#byelection
— Siddaramaiah (@siddaramaiah) October 2, 2021
‘ಜೆಡಿಎಸ್ ಪಕ್ಷಕ್ಕೆ ಮುಸ್ಲಿಮರ ಬಗ್ಗೆ ಕಾಳಜಿ ಇದ್ದಿದ್ದರೆ ಹಾಸನ, ಮೈಸೂರು, ಮಂಡ್ಯ ಭಾಗದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಬಹುದಲ್ಲವೇ? ಎಚ್.ಡಿ.ಕುಮಾರಸ್ವಾಮಿ(HD Kumaraswamy) ಮುಖ್ಯಮಂತ್ರಿ ಆಗಿದ್ದಾಗ ಯಾರಾದರೂ ಮುಸ್ಲಿಮರನ್ನು ಮಂತ್ರಿ ಮಾಡಿದ್ದಾರಾ?’ ಅಂತಾ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಬಸವರಾಜ್ ಬೊಮ್ಮಾಯಿ ರಾಜ್ಯಕ್ಕೆ ‘ಅತಿಥಿ ಸಿಎಂ’ನಂತಾಗಿದ್ದಾರೆ: ಕಾಂಗ್ರೆಸ್ ಟೀಕೆ
‘ಹಾನಗಲ್ ಕ್ಷೇತ್ರದ ಉಪಚುನಾವಣೆ(Hangal Byelections)ಗೆ ಸಂಬಂಧಿಸಿದಂತೆ ನಮ್ಮ ಪಕ್ಷದಿಂದ ಇಬ್ಬರು ಪ್ರಬಲ ಅಭ್ಯರ್ಥಿಗಳಿದ್ದಾರೆ. ಯಾರಿಗೇ ಪಕ್ಷದ ಟಿಕೆಟ್ ನೀಡಿದರೂ ಒಟ್ಟಾಗಿ ಕೆಲಸ ಮಾಡುವಂತೆ ಈ ಇಬ್ಬರಿಗೂ ಹೇಳಿದ್ದೇವೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ 2-3 ದಿನಗಳಲ್ಲಿ ಪಕ್ಷವು ಅಭ್ಯರ್ಥಿಯನ್ನು ಘೋಷಿಸಲಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಹಾನಗಲ್ ನಲ್ಲಿ 7ನೇ ತಾರೀಖಿನಂದು ಮತ್ತು ಸಿಂಧಗಿಯಲ್ಲಿ 8ನೇ ತಾರೀಖಿನಂದು ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ನಾನು, ಕೆ.ಪಿ.ಸಿ.ಸಿ ಅಧ್ಯಕ್ಷರಾದ @DKShivakumar ಅವರು ಎರಡೂ ಕಡೆ ನಾಮಪತ್ರ ಸಲ್ಲಿಕೆ ವೇಳೆಗೆ ಹೋಗುತ್ತೇವೆ. 5/5#byelection
— Siddaramaiah (@siddaramaiah) October 2, 2021
‘ಸಿಂಧಗಿ ಕ್ಷೇತ್ರದ ಉಪಚುನಾವಣೆಯ ಬಗ್ಗೆ ನಿನ್ನೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್(DK Shivakumar), ಜಿಲ್ಲಾ ಮುಖಂಡರು, ಆ ಭಾಗದ ಶಾಸಕರ ಜೊತೆ ಚರ್ಚೆ ನಡೆಸಲಾಗಿದೆ. ಅಶೋಕ್ ಮನಗೂಳಿ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹೈಕಮಾಂಡ್ ಈಗಾಗಲೇ ಘೋಷಣೆಯನ್ನು ಮಾಡಿದೆ. ಹಾನಗಲ್ ನಲ್ಲಿ 7ನೇ ತಾರೀಖಿನಂದು ಮತ್ತು ಸಿಂಧಗಿಯಲ್ಲಿ 8ನೇ ತಾರೀಖಿನಂದು ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ನಾನು, ಡಿ.ಕೆ.ಶಿವಕುಮಾರ್ ಎರಡೂ ಕಡೆ ನಾಮಪತ್ರ ಸಲ್ಲಿಕೆ ವೇಳೆಗೆ ಹೋಗುತ್ತೇವೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಜೆ.ಡಿ.ಎಸ್ ಪಕ್ಷಕ್ಕೆ ಮುಸ್ಲಿಮರ ಬಗ್ಗೆ ಕಾಳಜಿ ಇದ್ದಿದ್ದರೆ ಹಾಸನ, ಮೈಸೂರು, ಮಂಡ್ಯ ಭಾಗದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಬಹುದಲ್ಲವೇ?@hd_kumaraswamy ಮುಖ್ಯಮಂತ್ರಿ ಆಗಿದ್ದಾಗ ಯಾರಾದರೂ ಮುಸ್ಲಿಮರನ್ನು ಮಂತ್ರಿ ಮಾಡಿದ್ದಾರಾ? 2/5#byelection
— Siddaramaiah (@siddaramaiah) October 2, 2021
ಇದನ್ನೂ ಓದಿ: ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದೆ: ಸಿದ್ದರಾಮಯ್ಯ ಆರೋಪ
ಅಕ್ಟೋಬರ್ 30ರಂದು ಎರಡೂ ಕ್ಷೇತ್ರಗಳಿಗೆ ಚುನಾವಣೆ
ಅಕ್ಟೋಬರ್ 30ರಂದು ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಉಪ ಚುನಾವಣೆ(Byelections) ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರವು ಸಿ.ಎಂ.ಉದಾಸಿ ನಿಧನದಿಂದ ತೆರವಾಗಿತ್ತು. ಎಂ.ಸಿ.ಮನಗೂಳಿ ಅವರ ನಿಧನದಿಂದ ಸಿಂದಗಿ ಕ್ಷೇತ್ರವು ತೆರವಾಗಿದೆ. ಅ.1ರಂದು ಉಪಚುನಾವಣೆಯ ಅಧಿಸೂಚನೆ ಹೊರಡಿಸಲಾಗಿದ್ದು, ಅ.8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ.11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ.13 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ. ಅ.30ರಂದು ಮತದಾನ ನಡೆಯಲಿದ್ದು, ನ.2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.