ಬೆಂಗಳೂರು: ಗೃಹ ಸಚಿವ ಆರಗ ಜ್ನಾನೇಂದ್ರ(Aaraga Jnanendra) ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಶಿವಮೊಗ್ಗದಲ್ಲಿ ಹಿಂದುಪರ ಕಾರ್ಯಕರ್ತನ ಹತ್ಯೆ ಪ್ರಕರಣ(Shivamogga Youth Murder Case) ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ‘ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆಪರಾಧಿಗಳು ಯಾವುದೇ ಸಂಘಟನೆಗೆ ಸೇರಿದ್ದರೂ ಅವರನ್ನು ತಕ್ಷಣ ಬಂಧಿಸಿ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಆಗ್ರಹಿಸುತ್ತೇನೆ’ ಅಂತಾ ಹೇಳಿದ್ದಾರೆ.


HDK: ‘ತಮ್ಮ ಪಕ್ಷದ ಕಾರ್ಯಕರ್ತರನ್ನೇ ರಕ್ಷಣೆ ಮಾಡದವರು ರಾಜ್ಯವನ್ನು ಹೇಗೆ ರಕ್ಷಣೆ ಮಾಡ್ತಾರೆ?’


‘ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಕ್ಕೆ ಗೃಹ ಸಚಿವರ ಜಿಲ್ಲೆಯಲ್ಲಿಯೇ‌ ನಡೆದ ಅವರದ್ದೇ ಪರಿವಾರದ ಯುವಕನ ಹತ್ಯೆಯೇ ಸಾಕ್ಷಿ. ಸ್ವಂತ ಜಿಲ್ಲೆಯಲ್ಲಿಯೇ ಇಂತಹ ಕೃತ್ಯ ನಡೆದಿರುವುದರಿಂದ ಗೃಹ ಸಚಿವ ಆರಗ ಜ್ನಾನೇಂದ್ರ(Aaraga Jnanendra) ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ, ಅವರು ತಕ್ಷಣ ರಾಜೀನಾಮೆ ನೀಡಬೇಕು’ ಅಂತಾ ಆಗ್ರಹಿಸಿದ್ದಾರೆ.


‘ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಯಾರದ್ದೇ ಕೊಲೆಯಾದರೂ ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಬೇಕು ಎಂಬುದು ನನ್ನ ನಿಲುವು. ಹರ್ಷ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮೃತ ದುರ್ದೈವಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಹರ್ಷ ಕೊಲೆ ಆರೋಪಿಗಳು ಯಾವುದೇ ಪಕ್ಷ, ಸಮುದಾಯ, ಸಂಘಟನೆಗಳಿಗೆ ಸೇರಿದ್ದರೂ ಬಿಜೆಪಿ ಸರ್ಕಾರ(BJP Govt.) ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಪರಿಸ್ಥಿತಿ ಬಿಗಡಾಯಿಸದಂತೆ ನೋಡಿಕೊಳ್ಳಬೇಕು’ ಅಂತಾ ಹೇಳಿದ್ದಾರೆ.


#HinduBoyMurder: ಶಿವಮೊಗ್ಗದಲ್ಲಿ ಮುಸಲ್ಮಾನರು ಎಂದೂ ಕೂಡ ಬಾಲ ಬಿಚ್ಚಿರಲಿಲ್ಲ: ಸಚಿವ ಕೆ ಎಸ್ ಈಶ್ವರಪ್ಪ


‘ಇದು ಮಾದಕದ್ರವ್ಯದ ಅಮಲಿನಲ್ಲಿ ನಡೆದಿರುವ ಕೃತ್ಯ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯರು ಹೇಳಿರುವುದನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಳ್ಳಬೇಕು. ಅತ್ಯಂತ ಅಪಾಯಕಾರಿಯಾದ ಡ್ರಗ್ ಜಾಲದ ಬಗ್ಗೆಯೂ ತನಿಖೆ ನಡೆಯಲಿ. ಶಿವಮೊಗ್ಗ ಜಿಲ್ಲೆ ಬಿಜೆಪಿ ಪಕ್ಷದ ಘಟಾನುಘಟಿ ನಾಯಕರು ಇರುವ ಜಿಲ್ಲೆ. ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurapaa) ಹಾಗೂ ಗೃಹ ಸಚಿವ ಆರಗ ಜ್ನಾನೇಂದ್ರ ಅವರ ಜಿಲ್ಲೆಯ ಪರಿಸ್ಥಿತಿಯೇ ಹೀಗಾದರೆ ಉಳಿದ ಕಡೆ ಹೇಗೆ?’ ಅಂತಾ ಪ್ರಶ್ನಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.