ಗೃಹಸಚಿವರಿಂದ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯ ಕಳೆದುಕೊಂಡಿದೆ: ಸಿದ್ದರಾಮಯ್ಯ

ಅಸಮರ್ಥ ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Puttaraj K Alur | Last Updated : Jul 16, 2022, 09:46 AM IST
  • ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯ ಕಳೆದುಕೊಂಡಿದೆ
  • ಅನ್ಯಾಯ-ದೌರ್ಜನ್ಯಗಳಿಗೆ ಬಲಿಯಾಗಿರುವ ಜನರು ಪೊಲೀಸರ ನಿಷ್ಕ್ರೀಯತೆಯಿಂದಾಗಿ ಹತಾಶರಾಗಿದ್ದಾರೆ
  • ರಾಜ್ಯದಲ್ಲಿನ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕೆಟ್ಟುಹೋಗುತ್ತಿದೆ ಎಂದ ಸಿದ್ದರಾಮಯ್ಯ
ಗೃಹಸಚಿವರಿಂದ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯ ಕಳೆದುಕೊಂಡಿದೆ: ಸಿದ್ದರಾಮಯ್ಯ  title=
ಬಿಜೆಪಿ ಸರ್ಕಾರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ನಡೆದಿದ್ದ ಗಲಭೆ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಬೆಂಗಳೂರಿಗೆ ಆಗಮಿಸಲು ಬಿಜೆಪಿ ಶಾಸಕರಿಗೆ ಸೂಚನೆ

‘ಉದ್ರಿಕ್ತ ಸ್ಥಿತಿಯಲ್ಲಿ ಭೇಟಿ ನೀಡುವುದು ಸೂಕ್ತ ಅಲ್ಲವೆಂದು ತಿಳಿದು ಕೆಲವು ದಿನಗಳ ನಂತರ ಇಂದು ಬಂದು ಎರಡೂ ಗುಂಪಿನವರನ್ನು ಭೇಟಿ ಮಾಡಿದೆ. ಇಂತಹ ಘಟನೆಗಳಲ್ಲಿ ಅನವಶ್ಯಕವಾಗಿ ಪ್ರಚೋದನೆ ನೀಡಿ ಶಾಂತಿ-ಸೌಹಾರ್ದತೆ ಕೆಡಿಸುವ ಕೆಲಸವನ್ನು ಯಾರೂ ಮಾಡಬಾರದು’ ಎಂದು ಟ್ವೀಟ್ ಮಾಡಿದ್ದಾರೆ.

‘ರಾಜ್ಯದಲ್ಲಿನ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕೆಟ್ಟುಹೋಗುತ್ತಿದ್ದು, ಅನ್ಯಾಯ-ದೌರ್ಜನ್ಯಗಳಿಗೆ ಬಲಿಯಾಗಿರುವ ಜನರು ಪೊಲೀಸರ ನಿಷ್ಕ್ರೀಯತೆಯಿಂದಾಗಿ ಹತಾಶರಾಗಿದ್ದಾರೆ. ಅಸಮರ್ಥ ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ: ವೀಕ್ಎಂಡ್ ಕಿಕ್ ಏರಿಸಬೇಕಿದ್ದ ಗಾಂಜಾ ಸೀಜ್

‘ಗಲಭೆಯಲ್ಲಿ ಗಾಯಗೊಂಡವರ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ರೂಪದಲ್ಲಿ ಒಂದಷ್ಟು ಹಣ ನೀಡಿದ್ದೆ. ಹಣ ಬೇಡ, ನ್ಯಾಯ ಕೊಡಿ ಎಂದು ನೊಂದ ಕುಟುಂಬದವರು ಕೇಳಿದ್ದಾರೆ. ಅವರ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ. ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸುವುದು ರಾಜ್ಯ ಬಿಜೆಪಿ ಸರ್ಕಾರದ ಕರ್ತವ್ಯವಾಗಿದೆ’ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News