ʼನರೇಂದ್ರ ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರುʼ

ನರೇಂದ್ರ ಮೋದಿ ವಿಶ್ವಗುರು ಅಲ್ಲ, ಅವರೊಬ್ಬ ಪುಕ್ಕಲು ಗುರು, ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ವಿರುದ್ಧ ಗುಡುಗಿದ್ದಾರೆ.

Written by - Krishna N K | Last Updated : Oct 12, 2022, 07:48 PM IST
  • ರಾಹುಲ್‌ ಗಾಂಧಿಯವರನ್ನು ಬಚ್ಚಾ ಎಂದಿದ್ದಕ್ಕೆ ಸಿದ್ದರಾಮಯ್ಯ ಗರಂ
  • ನರೇಂದ್ರ ಮೋದಿ ವಿಶ್ವಗುರು ಅಲ್ಲ, ಅವರೊಬ್ಬ ಪುಕ್ಕಲು ಗುರು
  • ಬಿಎಸ್‌ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ
ʼನರೇಂದ್ರ ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರುʼ title=

ಬೆಂಗಳೂರು : ನರೇಂದ್ರ ಮೋದಿ ವಿಶ್ವಗುರು ಅಲ್ಲ, ಅವರೊಬ್ಬ ಪುಕ್ಕಲು ಗುರು, ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ವಿರುದ್ಧ ಗುಡುಗಿದ್ದಾರೆ.

ಬಿ.ಎಸ್‌.ಯಡಿಯೂರಪ್ಪ ಅವರು‌ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಕರೆದ ಹಿನ್ನಲೆ ಉಗ್ರ ರೂಪ ತಾಳಿರುವ ಕೈ ಪಾಳ ಬಿಎಸ್‌ವೈ ವಿರುದ್ಧ ವಾಕ್‌ ಸಮರ ಸಾರಿದೆ. ಇನ್ನು ಟ್ಟೀಟ್‌ ಮೂಲಕ ಗುಡುಗಿರುವ ಸಿದ್ದರಾಮಯ್ಯ ಅವರು, ಬಿಎಸ್‌ ಯಡಿಯೂರಪ್ಪ ಅವರೇ, ನಿಮ್ಮ ನರೇಂದ್ರ ಮೋದಿಯವರು
ವಿಶ್ವಗುರು ಅಲ್ಲ, ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಬಡಾಯಿ ಬೊಮ್ಮಾಯಿ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಯುವ ಪೀಳಿಗೆಗೆ ಸ್ಪೂರ್ತಿ ʼಪ್ರಲ್ಹಾದ್ʼ ಕಿರುಚಿತ್ರ : ʼಛಾಬ್ರಿಯಾʼ ದಂತಕಥೆಗೆ ಉತ್ತಮ ಪ್ರತಿಕ್ರಿಯೆ

ಅಲ್ಲದೆ ಪಾಪ, ಯಡಿಯೂರಪ್ಪ ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು ಎಂದು ಬಿಎಸ್‌ವೈಗೆ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ. 

ಇನ್ನು ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ರಾಜ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News