ನವೀನ್ ಸಾವಿಗೆ ರಷ್ಯಾ ಸೇನೆ ಎಷ್ಟು ಹೊಣೆಯೋ, ಬಿಜೆಪಿ ಸರ್ಕಾರವೂ ಅಷ್ಟೇ ಹೊಣೆ: ಸಿದ್ದರಾಮಯ್ಯ
ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯದ ವಕ್ತಾರರು ಅಂತಾರಾಷ್ಟ್ರೀಯ ಸಂಬಂಧಗಳನ್ನು ಬಳಸಿಕೊಂಡು ಯುದ್ದದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಪ್ರಯತ್ನಿಸಬೇಕು ಅಂತಾ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬೆಂಗಳೂರು: ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಇಂದು ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್(Naveen Shekarappa Gyanagoudar) ಸಾವನ್ನಪ್ಪಿದ್ದಾರೆ. ನವೀನ್ ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ಉಕ್ರೇನ್‌ನಲ್ಲಿ ರಷ್ಯಾ ಸೇನೆಯ ದಾಳಿಗೆ ಹಾವೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್(Naveen Gyanagoudar)ಬಲಿಯಾಗಿರುವುದು ಅತ್ಯಂತ ದುರದೃಷ್ಟಕರ. ಕುಟುಂಬಕ್ಕೆ ಆಧಾರವಾಗಿ ಬಾಳಿ ತಮ್ಮನ್ನು ಸಲಹಬೇಕಾಗಿದ್ದ ಮಗನ ಸಾವಿನಿಂದ ನೊಂದ ಕುಟುಂಬಕ್ಕೆ ನನ್ನ ಸಂತಾಪಗಳು. ಅವರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Russia Ukraine War: ಒಳ್ಳೆಯ ಡಾಕ್ಟರ್ ಆಗುವ ಕನಸು ಕಂಡಿದ್ದ ರ‍್ಯಾಂಕ್ ಸ್ಟೂಡೆಂಟ್ ನವೀನ್
Russia-Ukraine War: ಭಾರತೀಯ ವಿದ್ಯಾರ್ಥಿಯ ಸಾವು ಹಿನ್ನೆಲೆ, ಸಮನ್ಸ್ ಜಾರಿಗೊಳಿಸಿದ ಭಾರತ ಸರ್ಕಾರ
ನವೀನ ಅವರ ಮೃತದೇಹ(Naveen Gyanagoudar Dead Body)ವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆಸಲಾಗುವುದು. ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಉಳಿದ ವಿಧ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.