ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಯವರಿಗೆ ಶುಭಾಶಯ ತಿಳಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು ಕೇಂದ್ರದ ಮಲತಾಯಿ ಧೋರಣೆಯಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕಿಡಿಕಾರಿದ್ದಾರೆ.  


COMMERCIAL BREAK
SCROLL TO CONTINUE READING

‘ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ(Basavaraj Bommai)ಯವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು. ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ  ಸಿಗಲಿ ಎಂದು ಹಾರೈಸುತ್ತೇನೆ. ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ ಬಿ.ಎಸ್.ಯಡಿಯೂರಪ್ಪನವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ. ಆ ಧೈರ್ಯ ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಮನವಿ ಮಾಡಿದ ಬಿ.ಎಸ್.ಯಡಿಯೂರಪ್ಪ.!


Siddaramaiah)ಹೇಳಿದ್ದಾರೆ.


ಬಿಎಸ್​ವೈ ಬಗ್ಗೆ ಅನುಕಂಪವಿದೆ, ರಾಜೀನಾಮೆಯ ಕಾರಣ ಬಹಿರಂಗಪಡಿಸಲಿ: ಸಿದ್ದರಾಮಯ್ಯ


‘ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ, ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು. ವಿರೋಧ ಪಕ್ಷವಾಗಿ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ(State Development)ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ. ಸಾರ್ವಜನಿಕ ಮಹತ್ವದ ಹತ್ತಾರು ಪತ್ರಗಳನ್ನು ಬರೆದರೂ ಪ್ರತಿಕ್ರಿಯಿಸುವ ಸೌಜನ್ಯವನ್ನೂ ಹಿಂದಿನ ಮುಖ್ಯಮಂತ್ರಿಗಳು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ. ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ. ನಿಮ್ಮ ಕಾಲದಲ್ಲಿಯಾದರೂ ಮಾಹಿತಿ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ