ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ. 


COMMERCIAL BREAK
SCROLL TO CONTINUE READING

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಕಾರಿಣಿ ಸಭೆ ಇದಾಗಿದ್ದು ಸಂಸತ್ತಿನ ಅನೆಕ್ಸ್ ಸಭಾಂಗಣದಲ್ಲಿ ಸಭೆ ನಡೆಯಲಿದೆ. 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆ ನಡೆಸಲು ಕಾರ್ಯಕಾರಿಣಿ ಸಭೆ ಕರೆದಿರುವ ಕಾಂಗ್ರೆಸ್ ಯಾವ ರಾಜ್ಯದಲ್ಲಿ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಎನ್ನುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎನ್ನಲಾಗಿದೆ.


ಅಷ್ಟೇ ಅಲ್ಲದೆ, ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಸರಕಾರ ರಚಿಸಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲಿ ಎಷ್ಟು ಸ್ಥಾನಗಳ ಹಂಚಿಕೆ ಆಗಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಲಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆ.ಎಚ್. ಮುನಿಯಪ್ಪ ಸೇರಿದಂತೆ ಒಟ್ಟು 56 ಸದಸ್ಯರು ಭಾಗಿಯಾಗಲಿದ್ದಾರೆ. ಸಭೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ನಿನ್ನೆಯೇ ದೆಹಲಿಗೆ ಆಗಮಿಸಿದ್ದಾರೆ.