ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ತಯಾರಿ ನಡೆಸಲು ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವವು ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯನವರು ಗುರುವಾರ(ಆಗಸ್ಟ್ 3) ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ. ಮೇ ತಿಂಗಳಲ್ಲಿ 2ನೇ ಅವಧಿಗೆ ಸಿಎಂ ಆದ ಬಳಿಕ ಸಿದ್ದರಾಮಯ್ಯನವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡುತ್ತಿರುವುದು ಇದೇ ಮೊದಲು.


COMMERCIAL BREAK
SCROLL TO CONTINUE READING

‘ನಾನು ಸಿಎಂ ಆದ ನಂತರ ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಕಳೆದ ಬಾರಿ ನಾನು ದೆಹಲಿಯಲ್ಲಿದ್ದಾಗ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದರು. ಈ ಬಾರಿ ನನಗೆ ಸಮಯಾವಕಾಶ ನೀಡಲಾಗಿದ್ದು, ಅವರನ್ನು ಭೇಟಿ ಮಾಡಲಿದ್ದೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಅವರು ಪ್ರಧಾನಿ ಮಧ್ಯಸ್ಥಿಕೆ ಕೋರುವ ಸಾಧ್ಯತೆ ಇದೆ.


ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಜನಪರ ಖಾತರಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಟೀಕಿಸುತ್ತಿರುವ ಸಂದರ್ಭದಲ್ಲಿಯೇ ಈ ಸಭೆ ನಡೆಯಲಿದೆ. ‘ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಖಜಾನೆಯನ್ನು ಖಾಲಿ ಮಾಡುತ್ತದೆ, ರಾಜ್ಯವನ್ನು ದುರ್ಬಲಗೊಳಿಸುತ್ತದೆ ಮತ್ತು ಯುವಜನರ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸುತ್ತದೆ’ ಎಂದು ಪ್ರಧಾನಿ ಮೋದಿಯವರು ತಮ್ಮ ಇತ್ತೀಚಿನ ಭಾಷಣಗಳಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಡೆಲಿವರಿ ಬಾಯ್ಸ್ ಗಳ ಮೊಬೈಲ್ ಕದ್ದು ಮಜಾ ಮಾಡುತ್ತಿದ್ದ ಅಸ್ಸಾಂ ಮೂಲದ ಕಳ್ಳರ ಬಂಧನ


‘ಕರ್ನಾಟಕ ಸರ್ಕಾರವು ಅಭಿವೃದ್ಧಿಗೆ ಹಣದ ಕೊರತೆಯನ್ನು ಹೇಳಿಕೊಳ್ಳುತ್ತಿದೆ. ರಾಜಸ್ಥಾನದಲ್ಲೂ ಅದೇ ಪರಿಸ್ಥಿತಿ ಇದೆ. ಸಾಲದ ಹೊರೆ ಹೆಚ್ಚಿದ್ದು, ಅಭಿವೃದ್ಧಿ ಸ್ಥಗಿತಗೊಂಡಿದೆ. ನಮಗೆ ಸರಿಯಾದ ನೀತಿ ಮತ್ತು ಉದ್ದೇಶ ಬೇಕು’ ಎಂದು ಪುಣೆಯಲ್ಲಿ ಮಂಗಳವಾರ ಪ್ರಧಾನಿ ಮೋದಿ ಹೇಳಿದ್ದರು.


ಕಾಂಗ್ರೆಸ್ ಸರ್ಕಾರವು ಸುಮಾರು 52 ಸಾವಿರ ಕೋಟಿ ರೂ. ವೆಚ್ಚದಲ್ಲಿ ತನ್ನ 5 ಗ್ಯಾರಂಟಿ ಯೋಜನೆಗಳ ಪೈಕಿ ಮೂರನ್ನು ಈಗಾಗಲೇ ಜಾರಿಗೆ ತಂದಿದೆ. ಆಗಸ್ಟ್ 5ರಂದು ಉಚಿತ ವಿದ್ಯುತ್‌ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರಲು ಸಜ್ಜಾಗಿದೆ. ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಮತ್ತು 5 ಕೆಜಿ ಉಚಿತ ಅಕ್ಕಿ ಯೋಜನೆಗೆ ಬದಲಾಗಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ತಿಂಗಳಿಗೆ 170 ರೂ.ನಗದು ನೀಡಲಾಗುತ್ತಿದೆ.


ಸಚಿವರು, ಸಂಸದರು ಸೇರಿದಂತೆ ಕರ್ನಾಟಕದ 37 ಹಿರಿಯ ಕಾಂಗ್ರೆಸ್ ನಾಯಕರ ನಿಯೋಗ ಬುಧವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕ ರಾಹುಲ್ ಗಾಂಧಿ ಮತ್ತು ಇತರರನ್ನು ಭೇಟಿ ಮಾಡಿ ಲೋಕಸಭೆ ಚುನಾವಣೆಗೆ ತಂತ್ರಗಳು ಮತ್ತು ಕಾಂಗ್ರೆಸ್ ಭರವಸೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕಾರ್ಯತಂತ್ರ ರೂಪಿಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣ


‘ಒಟ್ಟು 37 ಹಿರಿಯ ನಾಯಕರನ್ನು ಸಭೆಗೆ ಕರೆಯಲಾಗಿದ್ದು, ಇದರಲ್ಲಿ ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಕೂಡ ಸೇರಿದ್ದಾರೆ. ನಾವು ಚುನಾವಣೆಯ ಬಗ್ಗೆ ಚರ್ಚಿಸುತ್ತಿದ್ದೇವೆ ಮತ್ತು ಅಭ್ಯರ್ಥಿಗಳ ಬಗ್ಗೆ ಚರ್ಚಿಸುವ ಹಂತವನ್ನು ತಲುಪಿಲ್ಲವೆಂದು ಸಿದ್ದರಾಮಯ್ಯನವರು ದೆಹಲಿ ಪ್ರವಾಸಕ್ಕೂ ಮುನ್ನ ಹೇಳಿದ್ದಾರೆ. ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೆಟ್ಟರ್ ಅವರನ್ನು ಕಣಕ್ಕಿಳಿಸಬಹುದು ಎಂಬ ಊಹಾಪೋಹಗಳಿವೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.