Prahlad Joshi: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಕಾನೂನಾತ್ಮಕವಾಗಿ ಹಣೆಯುವ ತಂತ್ರ ರೂಪಿಸುತ್ತಿದ್ದಾರೆ. ಈ ಪ್ರಯತ್ನ ಸಫಲವಾಗಿರಲಿಕ್ಕಿಲ್ಲ. ಆದರೆ ಪ್ರಯತ್ನ ನಿರಂತರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಕಾಂಗ್ರೆಸ್ ನಲ್ಲಿ ಏನೂ ಸರಿಯಾಗಿಲ್ಲ ಎಂದು ಸ್ವತಃ ಕಾಂಗ್ರೆಸ್ ಶಾಸಕ, ಸಚಿವರೇ ಬಹಿರಂಗವಾಗಿ ಹೇಳುತ್ತಿದ್ದಾರೆ. ಡಿ.ಕೆ. ಶಿವಕುಮಾರ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ಕೊಟ್ಟು, ಅವರನ್ನು ಕಾರ್ನರ್ ಮಾಡುವ ಪ್ರಯತ್ನ ಮೊದಲ ದಿನದಿಂದಲೇ ಜಾರಿಯಲ್ಲಿದೆ. ಹೀಗಾಗಿ ಇಬ್ಬರ ನಡುವಿನ ಗುದ್ದಾಟ ಗೌಪ್ಯವಾಗಿ ಉಳಿದಿಲ್ಲ. ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಲೋಕಸಭೆ ಚುನಾವಣೆಯ ಬಳಿಕ ಗ್ಯಾರಂಟಿ ಸರ್ಕಾರದ ಅಸ್ತಿತ್ವಕ್ಕೇ ಗ್ಯಾರಂಟಿ ಇಲ್ಲದಾಗಿದೆ ಎಂದರು.
ಇದನ್ನೂ ಓದಿ-Lok Sabha Election 2024: "ಬಿಜೆಪಿಯವರು ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ"
ಮಂಡ್ಯದಲ್ಲಿ ಹೆಚ್‌ಡಿಕೆ-ಸುಮಲತಾ ಟಿಕೆಟ್ ಫೈಟ್-ಜೋಶಿ ಹೇಳಿದ್ದೇನು
ಮಂಡ್ಯ ಸಂಸದೆ ಸುಮಲತಾ ಅವರ ಜೊತೆ ನಮ್ಮ ರಾಷ್ಟ್ರೀಯ ನಾಯಕರು ಮಾತನಾಡಿದ್ದಾರೆ. ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ. ಎರಡು ದಿನಗಳಲ್ಲಿ ಎಲ್ಲವೂ ಬಗೆ ಹರಿಯಲಿದೆ. ಪ್ರೀತಮಗೌಡ ಅವರೂ ಬೇಸರದಲ್ಲಿ ಮೈತ್ರಿ ಬಗ್ಗೆ ಅಪಸ್ವರ ಎತ್ತಿದ್ದಾರೆ. ಪ್ರಮುಖರು ಅವರ ಜೊತೆಗೆ ಮಾತನಾಡುತ್ತಾರೆ. ಬಿಜೆಪಿ ರಾಷ್ಟ್ರೀಯ ನಾಯಕರ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮಧ್ಯೆ ಮೈತ್ರಿ ಮಾತೂಕತೆ ನಡೆದುರುವುದರಿಂದ ನಾನು ಏನನ್ನೂ ಮಾತನಾಡುವುದಿಲ್ಲ. ಆ ಬಗ್ಗೆ ನಾಯಕರೇ ಮಾತನಾಡುತ್ತಾರೆ. ಅಲ್ಲಿಯ ವರೆಗೂ ಬಹಿರಂಗ ಹೇಳಿಕೆ ನೀಡದಂತೆ ಪ್ರೀತಮಗೌಡ ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ಅಲ್ಲದೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿಯಾಗಿ ಭಾವನೆಗಳನು ಹೇಳಿಕೊಳ್ಳುವ ಸಲಹೆ ನೀಡುತ್ತೇನೆ ಎಂದರು.
ಇದನ್ನೂ ಓದಿ-ಭರತ್ ಗೌಡ ಎಸ್‌ವಿ ಮುಡಿಗೆ ಜೀ ನ್ಯೂಸ್ "ಯುವರತ್ನ" ಪ್ರಶಸ್ತಿಯ ಗರಿ..!
ಬೆಳಗಾವಿ ಟಿಕೆಟ್ ಶೆಟ್ಟರ್‌ಗೆ ಫಿಕ್ಸ್-ಜೋಶಿ
ಬೆಳಗಾವಿ ಕ್ಷೇತ್ರಕ್ಕೆ ಜಗದೀಶ ಶೆಟ್ಟರ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಶೆಟ್ಟರ ಹೆಸರು ಮುಂಚೂಣಿಯಲ್ಲಿದೆ. ಇನೆರಡು ದಿನಗಳಲಿ ್ಲ ಎಲ್ಲವೂ ಬಗೆ ಹರಿಯಲಿದ್ದು, ಪರ-ವಿರೋಧದ ಬಗ್ಗೆ ರಾಷ್ಟ್ರೀಯ ನಾಯಕರು ಚರ್ಚೆ ಮಾಡಿ ಸುಖಾಂತ್ಯ ಗೊಳಿಸಲಿದ್ದಾರೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.