ಬೆಂಗಳೂರು: ರಾಜಕೀಯ ಏಳಿಗೆಗಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂ ಧರ್ಮ(Hinduism) ಒಡೆಯುವ ಪ್ರಯತ್ನ ನಡೆಸಿದರು ಎಂದು ಕರ್ನಾಟಕ ಬಿಜೆಪಿ ಆರೋಪಿಸಿದೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ #ಲಿಂಗಾಯತವಿರೋಧಿಸಿದ್ದರಾಮಯ್ಯ ಹ್ಯಾಶ್ ಟ್ಯಾಗ್ ಬಳಿಸಿ ಆಕ್ರೋಶ ವ್ಯಕ್ತಪಡಿಸಿದೆ.
‘ಬಿ.ಎಸ್.ಯಡಿಯೂರಪ್ಪ(BS Yediyurappa)ನವರು ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಮಠಾಧೀಶರನ್ನು ಮನೆಗೆ ಕರೆಸಿ ದುಡ್ಡು ಹಂಚಿದರು ಎನ್ನುವ ಮೂಲಕ ಸಿದ್ದರಾಮಯ್ಯ ಮಠಾಧೀಶರಿಗೆ ಅವಮಾನ ಮಾಡಿದ್ದಾರೆ. ಒಂದು ಸಮುದಾಯವನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಿಂದಿಸುವುದು ಹಾಗೂ ಒಡೆಯುವುದು ಸಿದ್ದರಾಮಯ್ಯ ಅವರಿಗೆ ಚಾಳಿಯಾಗಿಬಿಟ್ಟಿದೆ’ ಅಂತಾ ಬಿಜೆಪಿ ಟೀಕಿಸಿದೆ.
ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಹಿಂದೂ ಧರ್ಮ ಒಡೆಯುವ ಪ್ರಯತ್ನ ನಡೆಸಿದರು.
ಲಿಂಗಾಯತ ಪ್ರತ್ಯೇಕ ಧರ್ಮದ ಅಸ್ತ್ರ ಪ್ರಯೋಗಿಸಿ ಎಂ.ಬಿ.ಪಾಟೀಲರನ್ನು ಬಲಿಪಶುವಾಗಿಸಿದರು.
ಸಿದ್ದರಾಮಯ್ಯನವರೇ, ವೀರಶೈವ- ಲಿಂಗಾಯಿತ ಸಮುದಾಯ ಬಿಜೆಪಿ ಜೊತೆ ನಿಲ್ಲುವುದನ್ನು ತಡೆಯುವುದಕ್ಕಾಗಿ ಧರ್ಮ ವಿಭಜನೆಗೆ ಮುಂದಾಗಿದ್ದಲ್ಲವೇ?#ಲಿಂಗಾಯತವಿರೋಧಿಸಿದ್ದರಾಮಯ್ಯ
— BJP Karnataka (@BJP4Karnataka) October 26, 2021
‘ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿ(BJP)ಯ ಉದ್ದೇಶ. ಆದರೆ ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ(Siddaramaiah)ನವರ ಗುರಿ. ಗಡಿಗೆಯಲ್ಲಿ ತುಂಬಿರುವ ಹಾಲನ್ನು ಕೆಡಿಸುವುದಕ್ಕೆ ಒಂದು ಹನಿ ಹುಳಿ ಸಾಕಲ್ಲವೇ ? ಹಾಗೆಯೇ ಸಮಾಜ ವಿಭಜನೆಗೆ ಸಿದ್ದರಾಮಯ್ಯ ಅವರ ದ್ವೇಷದ ನುಡಿ ಸಾಕು’ ಅಂತಾ ಬಿಜೆಪಿ ಕುಟುಕಿದೆ.
ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯಗೆ ಪಿಎಚ್‌ಡಿ ನೀಡಬಹುದು: ಬಿಜೆಪಿ ಟೀಕೆ
ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿಯ ಉದ್ದೇಶ. ಆದರೆ ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ @siddaramaiah ಅವರ ಗುರಿ.
ಗಡಿಗೆಯಲ್ಲಿ ತುಂಬಿರುವ ಹಾಲನ್ನು ಕೆಡಿಸುವುದಕ್ಕೆ ಒಂದು ಹನಿ ಹುಳಿ ಸಾಕಲ್ಲವೇ ?
ಹಾಗೆಯೇ ಸಮಾಜ ವಿಭಜನೆಗೆ ಸಿದ್ದರಾಮಯ್ಯ ಅವರ ದ್ವೇಷದ ನುಡಿ ಸಾಕು.#ಲಿಂಗಾಯತವಿರೋಧಿಸಿದ್ದರಾಮಯ್ಯ
— BJP Karnataka (@BJP4Karnataka) October 26, 2021
‘ತಮ್ಮ ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಹಿಂದೂ ಧರ್ಮ ಒಡೆಯುವ ಪ್ರಯತ್ನ ನಡೆಸಿದರು. ಲಿಂಗಾಯತ ಪ್ರತ್ಯೇಕ ಧರ್ಮ(Lingayat Community)ದ ಅಸ್ತ್ರ ಪ್ರಯೋಗಿಸಿ ಎಂ.ಬಿ.ಪಾಟೀಲರನ್ನು ಬಲಿಪಶುವಾಗಿಸಿದರು. ಸಿದ್ದರಾಮಯ್ಯನವರೇ ವೀರಶೈವ- ಲಿಂಗಾಯಿತ ಸಮುದಾಯ ಬಿಜೆಪಿ ಜೊತೆ ನಿಲ್ಲುವುದನ್ನು ತಡೆಯುವುದಕ್ಕಾಗಿ ಧರ್ಮ ವಿಭಜನೆಗೆ ಮುಂದಾಗಿದ್ದಲ್ಲವೇ?’ ಅಂತಾ ಬಿಜೆಪಿ ಪ್ರಶ್ನಿಸಿದೆ.
‘ವೀರಶೈವ- ಲಿಂಗಾಯತ ಸಮುದಾ(Veerashaiva Lingayat community)ಯದ ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ಎಂದಾದರೂ ಗೌರವ ವ್ಯಕ್ತಪಡಿಸಿದ ಉದಾಹರಣೆ ಇದೆಯೇ? ಧರ್ಮ ವಿಭಜನೆಯ ಪ್ರಯತ್ನ ಮಾಡುವಾಗ ‘ಲಿಂಗಾಯತ ಸ್ವಾಮೀಜಿಗಳು ನೀಡಿದ ಮನವಿ’ ಪ್ರಕಾರ ಪ್ರತ್ಯೇಕ ಧರ್ಮದ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸಿದ್ದೆ ಎಂದು ಜಾರಿಕೊಂಡಿದ್ದು ನೆನಪಿಲ್ಲವೇ?’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.
‘ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ಜಾತಿಯವರು ಕಂಬಳಿ ನೇಯ್ತಾರಾ? ಕಾಗೇರಿ ಜಾತಿಯವರು ಕುರಿ ಕಾಯ್ತಾರಾ? ಎಂದು ಪ್ರಶ್ನಿಸುವ ಮೂಲಕ ಸಮಾಜವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದೀರಿ ಸಿದ್ದರಾಮಯ್ಯ? ಹಾಲಿನಂಥ ಸಮಾಜದಲ್ಲಿ ಜಾತಿ ಹುಳಿ ಹಿಂಡಿ ಒಡೆಯುವುದೇ ನಿಮ್ಮ ರಾಜಕೀಯ ಧರ್ಮ. ಸಮಾಜ ಒಟ್ಟಾಗಿದ್ದರೆ ಈ ಮಜವಾದಿಗೆ ಸಂಕಟವಾಗುತ್ತದೆ’ ಅಂತಾ ಬಿಜೆಪಿ ವಾಗ್ದಾಳಿ ನಡೆಸಿದೆ.
ವೀರಶೈವ- ಲಿಂಗಾಯತ ಸಮುದಾಯದ ಸ್ವಾಮೀಜಿಗಳ ಬಗ್ಗೆ @siddaramaiah ಎಂದಾದರೂ ಗೌರವ ವ್ಯಕ್ತಪಡಿಸಿದ ಉದಾಹರಣೆ ಇದೆಯೇ?
ಧರ್ಮ ವಿಭಜನೆಯ ಪ್ರಯತ್ನ ಮಾಡುವಾಗ "ಲಿಂಗಾಯತ ಸ್ವಾಮೀಜಿಗಳು ನೀಡಿದ ಮನವಿ" ಪ್ರಕಾರ ಪ್ರತ್ಯೇಕ ಧರ್ಮದ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸಿದ್ದೆ ಎಂದು ಜಾರಿಕೊಂಡಿದ್ದು ನೆನಪಿಲ್ಲವೇ?#ಲಿಂಗಾಯತವಿರೋಧಿಸಿದ್ದರಾಮಯ್ಯ pic.twitter.com/64oeXhTNIk
— BJP Karnataka (@BJP4Karnataka) October 26, 2021
ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ
‘ಸಿದ್ದರಾಮಯ್ಯ ಅವರೇ ವೀರಶೈವ - ಲಿಂಗಾಯತ ಸಮುದಾಯದ ಮೇಲೆ ನಿಮಗೇಕೆ ದ್ವೇಷ? ಹಿಂದೆ ಧರ್ಮ ಒಡೆಯಲು ಹೋಗಿ ಆ ಸಮುದಾಯದ ಭಾವನೆ ಕೆರಳಿಸಿದಿರಿ. ಈಗ ಬಸವರಾಜ್ ಬೊಮ್ಮಾಯಿ ಜಾತಿಯವರು ಕಂಬಳಿ ನೇಯುತ್ತಾರಾ ಎಂದು ಪ್ರಶ್ನಿಸುವ ಮೂಲಕ ಕಾಯಕ ಧರ್ಮವನ್ನು ಅಪಮಾನ ಮಾಡುತ್ತಿದ್ದೀರಿ’ ಎಂದು ಬಿಜೆಪಿ ಟೀಕಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ