ಬೆಂಗಳೂರು: ರಾಜಕೀಯ ಏಳಿಗೆಗಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂ ಧರ್ಮ(Hinduism) ಒಡೆಯುವ ಪ್ರಯತ್ನ ನಡೆಸಿದರು ಎಂದು ಕರ್ನಾಟಕ ಬಿಜೆಪಿ ಆರೋಪಿಸಿದೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ #ಲಿಂಗಾಯತವಿರೋಧಿಸಿದ್ದರಾಮಯ್ಯ ಹ್ಯಾಶ್ ಟ್ಯಾಗ್ ಬಳಿಸಿ ಆಕ್ರೋಶ ವ್ಯಕ್ತಪಡಿಸಿದೆ.


COMMERCIAL BREAK
SCROLL TO CONTINUE READING

‘ಬಿ.ಎಸ್.ಯಡಿಯೂರಪ್ಪ(BS Yediyurappa)ನವರು ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಮಠಾಧೀಶರನ್ನು ಮನೆಗೆ ಕರೆಸಿ ದುಡ್ಡು ಹಂಚಿದರು ಎನ್ನುವ ಮೂಲಕ ಸಿದ್ದರಾಮಯ್ಯ ಮಠಾಧೀಶರಿಗೆ ಅವಮಾನ ಮಾಡಿದ್ದಾರೆ. ಒಂದು ಸಮುದಾಯವನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಿಂದಿಸುವುದು ಹಾಗೂ ಒಡೆಯುವುದು ಸಿದ್ದರಾಮಯ್ಯ ಅವರಿಗೆ ಚಾಳಿಯಾಗಿಬಿಟ್ಟಿದೆ’ ಅಂತಾ ಬಿಜೆಪಿ ಟೀಕಿಸಿದೆ.


ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯಗೆ ಪಿಎಚ್‌ಡಿ ನೀಡಬಹುದು: ಬಿಜೆಪಿ ಟೀಕೆ


Basavaraj Bommai) ಜಾತಿಯವರು ಕಂಬಳಿ ನೇಯ್ತಾರಾ? ಕಾಗೇರಿ ಜಾತಿಯವರು ಕುರಿ ಕಾಯ್ತಾರಾ? ಎಂದು ಪ್ರಶ್ನಿಸುವ ಮೂಲಕ ಸಮಾಜವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದೀರಿ ಸಿದ್ದರಾಮಯ್ಯ? ಹಾಲಿನಂಥ ಸಮಾಜದಲ್ಲಿ ಜಾತಿ ಹುಳಿ ಹಿಂಡಿ ಒಡೆಯುವುದೇ  ನಿಮ್ಮ ರಾಜಕೀಯ ಧರ್ಮ. ಸಮಾಜ ಒಟ್ಟಾಗಿದ್ದರೆ ಈ ಮಜವಾದಿಗೆ ಸಂಕಟವಾಗುತ್ತದೆ’ ಅಂತಾ ಬಿಜೆಪಿ ವಾಗ್ದಾಳಿ ನಡೆಸಿದೆ.


ಸಿದ್ದರಾಮಯ್ಯ ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ


‘ಸಿದ್ದರಾಮಯ್ಯ ಅವರೇ ವೀರಶೈವ - ಲಿಂಗಾಯತ ಸಮುದಾಯದ ಮೇಲೆ ನಿಮಗೇಕೆ ದ್ವೇಷ? ಹಿಂದೆ ಧರ್ಮ ಒಡೆಯಲು ಹೋಗಿ ಆ ಸಮುದಾಯದ ಭಾವನೆ ಕೆರಳಿಸಿದಿರಿ. ಈಗ ಬಸವರಾಜ್ ಬೊಮ್ಮಾಯಿ ಜಾತಿಯವರು ಕಂಬಳಿ ನೇಯುತ್ತಾರಾ ಎಂದು ಪ್ರಶ್ನಿಸುವ ಮೂಲಕ ಕಾಯಕ ಧರ್ಮವನ್ನು ಅಪಮಾನ ಮಾಡುತ್ತಿದ್ದೀರಿ’ ಎಂದು ಬಿಜೆಪಿ ಟೀಕಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ