ಬೆಂಗಳೂರು: ನೂತನ ಪರಿಷ್ಕೃತ ಪಠ್ಯ ರಚನೆಯಾಗುವವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸಿ ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
‘ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಮುಖ್ಯಮಂತ್ರಿಯವರ ಮಾತಿನಲ್ಲಿರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ?’ ಎಂದು ಪ್ರಶ್ನಿಸಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. 8/8#SaveKarnataka
— Siddaramaiah (@siddaramaiah) June 4, 2022
ಇದನ್ನೂ ಓದಿ: ಖರ್ಗೆ ಮೇಲುಗೈ ಆಗುತ್ತದೆಂಬ ಭಯದಿಂದ ಡಿಕೆಶಿ-ಸಿದ್ದರಾಮಯ್ಯರಿಂದ ಹೊಂದಾಣಿಕೆ ನಾಟಕ: ಬಿಜೆಪಿ
ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? 1/8#SaveKarnataka
— Siddaramaiah (@siddaramaiah) June 4, 2022
‘ಬಸವಣ್ಣನವರ ವಿಚಾರವೂ ಸೇರಿ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಸಿಎಂ ಸ್ಪಷ್ಟಪಡಿಸಬೇಕು. ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. ಬಿಜೆಪಿ ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ?’ವೆಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು. 7/8#SaveKarnataka
— Siddaramaiah (@siddaramaiah) June 4, 2022
‘ಪಠ್ಯ ಪರಿಷ್ಕರಣಾ ಸಮಿತಿಗೆ ಅನರ್ಹರ ನೇಮಕ ಮತ್ತು ಅದರಿಂದ ಸೃಷ್ಟಿಯಾಗಿರುವ ವಿವಾದಕ್ಕೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಯಾವ ಪಠ್ಯವನ್ನು ಓದಬೇಕೆಂಬ ಬಗ್ಗೆ ವಿದ್ಯಾರ್ಥಿಗಳು, ಯಾವುದನ್ನು ಬೋಧಿಸಬೇಕೆಂದು ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಏನು ಪರಿಹಾರ? ಸಿಎಂ ಬೊಮ್ಮಾಯಿಯವರೇ ಸ್ಪಷ್ಟಪಡಿಸಬೇಕು. ಈಗಿನ ಗೊಂದಲಗಳಿಗಿರುವ ಏಕೈಕ ಪರಿಹಾರವೆಂದರೆ ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ, ನೂತನ ಪರಿಷ್ಕೃತ ಪಠ್ಯ ರಚನೆಯಾಗುವವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು. ಸಿಎಂ ಜಿದ್ದಿಗೆ ಬೀಳದೆ ಈ ನಿರ್ಧಾರ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. @BJP4Karnataka ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ? 4/8#SaveKarnataka
— Siddaramaiah (@siddaramaiah) June 4, 2022
ಇದನ್ನೂ ಓದಿ: RSS ತಂಟೆಗೆ ಬರಬೇಡಿ…ಹುಷಾರ್! ಸಿದ್ದರಾಮಯ್ಯಗೆ ಈಶ್ವರಪ್ಪ ಖಡಕ್ ವಾರ್ನಿಂಗ್
‘ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪುರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು. ಕಳೆದ 10 ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯ ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು @CMofKarnataka ಅವರು ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿ @BSBommai ಅವರು ಸ್ಪಷ್ಟಪಡಿಸಬೇಕು. 3/8#SaveKarnataka
— Siddaramaiah (@siddaramaiah) June 4, 2022
ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ @CMofKarnataka ಅವರ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ? 2/8#SaveKarnataka
— Siddaramaiah (@siddaramaiah) June 4, 2022
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.