ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು?: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
RSS ಇರಲಿ, SDPI ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಭೇಟಿ ಬಚಾವೊ, ಭೇಟಿ ಪಡಾವೋ ಎನ್ನುತ್ತಾರೆ. ಬಿಜೆಪಿ ಪಕ್ಷದವರೇ ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿ(BJP)ಯ ನಿಲುವೇನು ಎಂದು ಮೋದಿಯವರೇ ಉತ್ತರಿಸಬೇಕು ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah)ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಹಿಜಾಬ್ ವಿವಾದ(Hijab Row) ವಿಚಾರವಾಗಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು, ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai)ಯವರನ್ನು ಒತ್ತಾಯಿಸುತ್ತೇನೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
"ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿರುವುದು ಅಸಹ್ಯ ರಾಜಕಾರಣದ ಪರಮಾವಧಿ"
‘ಹಿಜಾಬ್ ವಿವಾದ(Karnataka Hijab Row)ಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಕಮಿಟಿ ಇರುವ ಕಡೆಗಳಲ್ಲಿ ಸಮಿತಿಯು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳು (ಆಂಗ್ಲ ಮಾಧ್ಯಮ) ಶಾಲೆಗಳಿಗೂ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ’ ಅಂತಾ ಹೇಳಿದ್ದಾರೆ.
DK Shivakumar) ಸಿಎಂ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿ, ಗೊಂದಲ ನಿವಾರಿಸುವಂತೆ ಹೇಳಿದ್ದೇವೆ.ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಕಾಳಜಿ’ ಅಂತಾ ಟ್ವೀಟ್ ಮಾಡಿದ್ದಾರೆ.
Cabinet Meeting : ಸಚಿವ ಸಂಪುಟ ಸಭೆ : ಮಾರ್ಚ್ 4ಕ್ಕೆ ಬಜೆಟ್ ಮಂಡನೆ ಫಿಕ್ಸ್?!
‘ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು RSS ಇರಲಿ, SDPI ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ’ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.