Siddaramaiah : ರಾಜ್ಯದಲ್ಲಿ ಭಾರೀ ಮಳೆ : KCET 2021 ಮುಂದೂಡಿ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿ 

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 25 ರಂದು ನಿಗದಿಯಾಗಿದ್ದ ಕೆ-ಸಿಇಟಿ 2021 ಪರೀಕ್ಷೆಗಳನ್ನು ಮುಂದೂಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಕೋರಿದ್ದಾರೆ. 

Written by - Channabasava A Kashinakunti | Last Updated : Jul 25, 2021, 12:27 PM IST
  • ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ
  • ಜುಲೈ 25 ರಂದು ನಿಗದಿಯಾಗಿದ್ದ KCET 2021 ಪರೀಕ್ಷೆಗಳನ್ನು ಮುಂದೂಡಬೇಕು
  • ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ನೀಡಿರುವ ಸಿದ್ದರಾಮಯ್ಯ
Siddaramaiah : ರಾಜ್ಯದಲ್ಲಿ ಭಾರೀ ಮಳೆ : KCET 2021 ಮುಂದೂಡಿ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿ  title=

ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 25 ರಂದು ನಿಗದಿಯಾಗಿದ್ದ ಕೆ-ಸಿಇಟಿ 2021 ಪರೀಕ್ಷೆಗಳನ್ನು ಮುಂದೂಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಕೋರಿದ್ದಾರೆ. 

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (KCET 2021) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತದೆ. ಎಂಜಿನಿಯರಿಂಗ್, ಬ್ಯಾಚುಲರ್ ಆಫ್ ಫಾರ್ಮಸಿ (ಬಿಫಾರ್ಮಾ), ಡಿಪ್ಲೊಮಾ ಇನ್ ಫಾರ್ಮಸಿ (ಡಿಫಾರ್ಮಾ), ಕೃಷಿ ಕೋರ್ಸ್‌ಗಳು (ಫಾರ್ಮ್ ಸೈನ್ಸ್) ಮತ್ತು ಪಶುವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಸಲಾಗುತ್ತದೆ.

ಇದನ್ನೂ ಓದಿ : Karnataka Unlock 5.O : ರಾಜ್ಯದಲ್ಲಿ ಮತ್ತೆ ಅನ್ಲಾಕ್ 5.O : ನಾಳೆಯಿಂದ ಯಾವುದುಕ್ಕೆಲ್ಲ ಸಡಿಲಿಕೆ? 

ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ನೀಡಿರುವ ಸಿದ್ದರಾಮಯ್ಯ(Siddaramaiah), ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರವಾಹ ಪರಸ್ಥಿತಿ ಎದುರಾಗಿದೆ ಮತ್ತು ಕೆಲವು ಕಡೆ ಜನರು ರಸ್ತೆ ಸಂಪರ್ಕ ಕಳೆದುಕೊಂಡಿದ್ದಾರೆ.

ಭಾರಿ ಮಳೆ(Heavy Rain)ಯಿಂದಾಗಿ ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ಪ್ರವಾಹದಿಂದ ಮುಳುಗುತ್ತಿವೆ. ಜನರು ಸಂಪರ್ಕ ಮತ್ತು ಸಂವಹನ ಎರಡನ್ನೂ ಕಳೆದುಕೊಂಡಿದ್ದಾರೆ. ಈ ಪರಿಸ್ಥಿತಿ ಕಾರಣದಿಂದ ಜುಲೈ 25 ರಂದು ನಿಗದಿಯಾಗಿದ್ದ ಕೆ-ಸಿಇಟಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ನಾನು ರಾಜ್ಯದ ಸಿಎಂ ಅವರನ್ನ ಒತ್ತಾಯಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಈಗಾಗಲೇ ಅನೇಕರು ಪ್ರವಾಹ ಪರಸ್ಥಿತಿಯನ್ನ ಎದುರಿಸುತ್ತಿದ್ದಾರೆ.

ಇದನ್ನೂ ಓದಿ : Heavy Rain in Karnataka : ರಾಜ್ಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಭೀತಿ : 7 ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್'

ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಹಾಗೆಯೇ ಕರ್ನಾಟಕ(Karnataka)ದ ದಕ್ಷಿಣ ಒಳನಾಡು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರವಾಹದಲ್ಲಿ ಸಿಕ್ಕಿಬಿದ್ದ ಜನರನ್ನ ರಕ್ಷಣೆ ಮತ್ತು ಪರಿಹಾರಕ್ಕಾಗಿ ಭಾರತೀಯ ಕರಾವಳಿ ಕಾವಲು ಪಡೆ (ICG) ಉತ್ತರ ಕನ್ನಡದ ಮಳೆ ಪೀಡಿತ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ. ಈವರೆಗೆ 155 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News