ಸಭಾಧ್ಯಕ್ಷರ ಇಂದಿನ‌ ನಿರ್ಣಯ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು-ಸಿದ್ದರಾಮಯ್ಯ

 ರಾಜೀನಾಮೆ ನೀಡಿದ್ದ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್  ಅವರ ನಿರ್ಣಯವನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವಾಗತಿಸಿದ್ದಾರೆ. ಸ್ಪೀಕರ್ ನಿರ್ಣಯ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು ಎಂದು ಹೇಳಿದ್ದಾರೆ.

Last Updated : Jul 28, 2019, 01:21 PM IST
ಸಭಾಧ್ಯಕ್ಷರ ಇಂದಿನ‌ ನಿರ್ಣಯ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು-ಸಿದ್ದರಾಮಯ್ಯ title=
file photo

ಬೆಂಗಳೂರು:  ರಾಜೀನಾಮೆ ನೀಡಿದ್ದ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್  ಅವರ ನಿರ್ಣಯವನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವಾಗತಿಸಿದ್ದಾರೆ. ಸ್ಪೀಕರ್ ನಿರ್ಣಯ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು ಎಂದು ಹೇಳಿದ್ದಾರೆ.

ಸ್ಪೀಕರ್ ನಿರ್ಣಯದ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ಧರಾಮಮಯ್ಯ "ಮಾನ್ಯ ಸಭಾಧ್ಯಕ್ಷರು ಎಲ್ಲ 14 ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಯಡಿ ಅನರ್ಹಗೊಳಿಸಿ ಹೊರಡಿಸಿರುವ ಆದೇಶ ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು. ಸ್ವಾರ್ಥ ಸಾಧನೆ, ಅಧಿಕಾರದಾಸೆಯಿಂದ ಜನಾದೇಶವನ್ನು ಧಿಕ್ಕರಿಸಿ ತಮ್ಮನ್ನು ತಾವು ಮಾರಿಕೊಳ್ಳುವ ಹೀನ ಸಂಸ್ಕೃತಿಗೆ ಈ ತೀರ್ಪು ಇತಿಶ್ರೀ ಹಾಡಲಿದೆ ಎಂಬುದು ನನ್ನ ನಂಬಿಕೆ' ಎಂದು ಹೇಳಿದ್ದಾರೆ.

ಇನ್ನು ಮುಂದುವರೆದು 'ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಪದವಿ, ಅಧಿಕಾರ ರಾಜಕಾರಣದಲ್ಲಿ ಎಂದಿಗೂ ಶಾಶ್ವತವಲ್ಲ. ಮುಂದಿನ ಪೀಳಿಗೆಯ ರಾಜಕಾರಣಕ್ಕೆ ನಾವು ಮಾದರಿಯಾಗಿ ಏನನ್ನು ಬಿಟ್ಟುಹೋಗುತ್ತೇವೆ ಎಂಬುದು ಮುಖ್ಯ. ಸಭಾಧ್ಯಕ್ಷರ ಇಂದಿನ‌ ನಿರ್ಣಯ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು. ಅವರ ಈ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ 

Trending News