ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ?
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮದೇ ಆದ ರಾಜಕೀಯ ಪಟ್ಟುಗಳ ಮೂಲಕ ಪ್ರಧಾನಿ ಮೋದಿ ಹಾಗೂ ಬಿಜೆಪಿಯವರ ನಿದ್ದೆಗೆಡಿಸಿದ್ದ ಸಿದ್ದರಾಮಯ್ಯ,ಈಗ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಡುವ ಮುನ್ಸೂಚನೆ ಹೈಕಮಾಂಡನಿಂದ ದೊರಕಿದೆ.
ಈ ಕುರಿತಾಗಿ ಸ್ವತಃ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯನವರ ವರ್ಚಸ್ಸನ್ನು ರಾಷ್ಟ್ರಮಟ್ಟದಲ್ಲಿ ಬಳಸಿಕೊಳ್ಳುವತ್ತ ಚಿಂತನೆ ನಡೆಸಿದೆ ಎನ್ನಲಾಗಿದೆ. ಈಗಾಗಲೇ ಸಿದ್ದರಾಮಯ್ಯನವರಿಗೆ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ದರಾಗಲು ಕಾಂಗ್ರೆಸ್ ಹೈಕಮಾಂಡ್ ತಿಳಿಸಿದೆ ಎನ್ನಲಾಗಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಸಿದ್ದರಾಮಯ್ಯನವರು ದೆಹಲಿ ರಾಜಕಾರಣಕ್ಕೆ ಎಂಟ್ರಿ ಕೊಡುವುದರ ಮೂಲಕ ಎಂದಿನಂತೆ ತಮ್ಮ ಖದರನ್ನು ದಿಲ್ಲಿಯಲ್ಲಿಯೂ ತೋರಿಸಲಿದ್ದಾರೆ ಎನ್ನುತ್ತಿವೆ ಪಕ್ಷದ ಮೂಲಗಳು.