ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಎಸ್. ಆರ್. ಪಾಟೀಲ್ ಸಹ ಸಿಎಂ ಗೆ ಸಾಥ್ ನೀಡಲಿದ್ದಾರೆ.
ಕರ್ನಾಟಕ ಕಾಂಗ್ರೇಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಕಳೆದ ಕೆಲ ದಿನಗಳಿಂದ ಕಾಂಗ್ರೇಸ್ ಕಾರ್ಯಕರ್ತರ ಜೊತೆ ಸಭೆ ನಡೆಸಿದ್ದು, ಚುನಾವಣೆ ತಯಾರಿ ನಡೆಸಿದ್ದಾರೆ. ಹೈಕಮಾಂಡ್ ಜೊತೆಗಿನ ಇಂದಿನ ಸಭೆಯಲ್ಲಿ ಕೆ.ಸಿ. ವೇಣುಗೋಪಾಲ್ ಸಹ ಜೊತೆಗಿರಲಿದ್ದು ರಾಜ್ಯ ಕಾಂಗ್ರೇಸ್ ಬಗ್ಗೆ ರಾಹುಲ್ ಗಾಂಧಿಗೆ ಮಾಹಿತಿ ನೀಡಲಿದ್ದಾರೆ.