ಬೆಂಗಳೂರು: ರಾಜ್ಯದ ಜನರು ಕೊರೊನಾ ಸೋಂಕು, ಆರ್ಥಿಕ ಸಂಕಷ್ಟ, ವೈದ್ಯಕೀಯ ನೆರವಿನ ಅಭಾವ ಸೇರಿ ಹಲವು ಸಮಸ್ಯೆಗಳಿಂದ ನಲುಗಿ ಹೋಗಿದ್ದಾರೆ. ಈ ಬಗ್ಗೆ ಚರ್ಚಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಹೀಗಾಗಿ ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ(Siddaramaiah), ‘ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005ರ ಸೆಕ್ಷನ್ 3 ಮತ್ತು 4ರಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ ಇದುವರೆಗೂ ಸರ್ಕಾರ ಅಧಿವೇಶನ ನಡೆಸಲು ಯಾವುದೇ ಕ್ರಮ ಕೈಗೊಳ್ಳದೆ ಉದಾಸೀನ ಮಾಡುತ್ತಿರುವುದು ನಿಯಮಬಾಹಿರ ಕ್ರಮವಾಗಿದೆ’ ಎಂದಿದ್ದಾರೆ.
ರಾಜ್ಯದ ಜನ ಕೊರೊನಾ ಸೋಂಕು, ಆರ್ಥಿಕ ಸಂಕಷ್ಟ, ವೈದ್ಯಕೀಯ ನೆರವಿನ ಅಭಾವ ಮುಂತಾದ ಸಮಸ್ಯೆಗಳಿಂದ ನಲುಗಿ ಹೋಗಿದ್ದು, ಈ ಬಗ್ಗೆ ಚರ್ಚಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಹಾಗಾಗಿ ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯಬೇಕು ಎಂದು ಮುಖ್ಯಮಂತ್ರಿ @BSYBJP ಅವರನ್ನು ಆಗ್ರಹಿಸುತ್ತೇನೆ. pic.twitter.com/xUE3ebKCN1
— Siddaramaiah (@siddaramaiah) July 14, 2021
ಇದನ್ನೂ ಓದಿ: Monsoon 2021 : ಇಂದಿನಿಂದ ಜು.16ರವರೆಗೂ ರಾಜ್ಯದಲ್ಲಿ ಭಾರೀ ಮಳೆ!
‘ರಾಜ್ಯದ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಜ್ಯದ ಆರ್ಥಿಕ, ರಾಜಕೀಯ, ಆಡಳಿತಾತ್ಮಕ ಮತ್ತು ಆರೋಗ್ಯ ಕ್ಷೇತ್ರಗಳ ಸ್ಥಿತಿ ಹದಗೆಟ್ಟಿದೆ. ರಾಜ್ಯ ಸರ್ಕಾರ ಕೊರೊನಾ 2ನೇ ಅಲೆ(
(Coronavirus 2 Wave) ನಿಭಾಯಿಸಿದ ರೀತಿ ಜನರ ಪಾಲಿಗೆ ಮಾರಣಾಂತಿಕವಾಗಿತ್ತು. ಈಗಾಗಲೇ 3ನೇ ಅಲೆಯ ಭೀತಿ ಜನರನ್ನು ಕಾಡುತ್ತಿದೆ. ಜನರಿಗ ಇನ್ನೂ ಸಮರ್ಪಕ ವ್ಯಾಕ್ಸಿನ್ ದೊರೆತಿಲ್ಲ. 3ನೇ ಅಲೆಯನ್ನು ನಿಭಾಯಿಸಲು ಸರ್ಕಾರ ಯಾವ ರೀತಿ ತಯಾರಿ ಮಾಡಿಕೊಂಡಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ನ್ಯಾಯುತ ಪರಿಹಾರ ನೀಡದೆ ವಂಚಿಸುತ್ತಿದೆ. ಆದರೂ ಸಿಎಂ ಬಿಎಸ್ವೈ ಸೇರಿ ಬಿಜೆಪಿ ನಾಯಕರು ಕಮಕ್ ಕಿಮಕ್ ಎನ್ನದೆ ಕುಳಿತಿದ್ದಾರೆ. ಇವೆಲ್ಲವೂಗಳ ಮಧ್ಯೆ ರಾಜ್ಯ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಕಾಲೇಜು ಆರಂಭಕ್ಕೆ ಸರ್ಕಾರದ ಸಿದ್ಧತೆ: ಸಿ.ಎನ್.ಅಶ್ವತ್ಥನಾರಾಯಣ್
ಕೃಷಿ ಕ್ಷೇತ್ರದ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ಹೆಚ್ಚುತ್ತಿದೆ. ಅಕ್ರಮ ಗಣಿಗಾರಿಕೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಆಡಳಿತ ಯಂತ್ರವೇ ಕುಸಿದು ಹೋಗಿದೆ. ರಾಜ್ಯದ ಜನರು ಅನುಭವಿಸುತ್ತಿರುವ ಸಂಕಷ್ಟಗಳ ಕುರಿತು ಚರ್ಚಿಸಿ ಅವುಗಳಿಗೆ ಸಮರ್ಪಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿಧಾನಮಂಡಲ ಅಧಿವೇಶನ(Assembly Session) ನಡೆಯಬೇಕಾಗಿದೆ. ನಿಯಮಗಳ ಪ್ರಕಾರ ಪ್ರತಿವರ್ಷ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕು. ವರ್ಷದಲ್ಲಿ 4 ಅಧಿವೇಶನ ನಡೆಸಬೇಕೆಂದು ಕಾಯ್ದೆ ಹೇಳುತ್ತದೆ. ಜನವರಿಯಲ್ಲಿ 15, ಮಾರ್ಚ್ ನಲ್ಲಿ 20, ಜುಲೈನಲ್ಲಿ 15 ಮತ್ತು ನವೆಂಬರ್ ನಲ್ಲಿ 10 ದಿನ ಅಧಿವೇಶನ ನಡೆಸಬೇಕು. ಆದರೆ ಬಿಜೆಪಿ ಆಡಳಿತ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದೆ. 2020ರಲ್ಲಿ ಒಟ್ಟು 31 ದಿನ ಮತ್ತು 2021ರಲ್ಲಿ ಇದುವರೆಗೆ 20 ದಿನ ಮಾತ್ರ ಅಧಿವೇಶನ ನಡೆದಿದೆ. ಬೆಳಗಾವಿಯಲ್ಲಿ ಇದುವರೆಗೆ ಒಂದೂ ಅಧಿವೇಶನ ನಡೆಸಿಲ್ಲ. ಹೀಗಾಗಿ ಕೂಡಲೇ ಅಧಿವೇಶನ ನಡೆಸಬೇಕೆಂದು ಸಿದ್ದರಾಮಯ್ಯನವರು ಸಿಎಂ ಬಿಎಸ್ವೈಗೆ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ