ಬೆಂಗಳೂರು: ರಾಮನಗರದಲ್ಲಿ ಚಿತ್ರ ನಗರಿ ನಿರ್ಮಾಣಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. 


COMMERCIAL BREAK
SCROLL TO CONTINUE READING

ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ರಾಮನಗರದಲ್ಲಿ ಚಿತ್ರನಗರಿ ನಿರ್ಮಾಣಕ್ಕಿಂತ ಮೈಸೂರಿನಲ್ಲೇ ಚಿತ್ರ ನಗರಿ ಸ್ಥಾಪನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಹೊಸದಾಗಿ ಮಂಡಿಸಿರುವ ಬಜೆಟ್​​​ ನಲ್ಲಿ ಚಿತ್ರನಗರಿಯನ್ನು ರಾಮನಗರಕ್ಕೆ ಸ್ಥಳಾಂತರಿಸಿದ್ದೀರಿ. ಹೀಗಾಗಿ ನೀವೀಗ ಬಜೆಟ್ ​​ನಲ್ಲಿ ಮಂಡಿಸಿರುವ ನಿರ್ಧಾರ ಮರುಪರಿಶೀಲಿಸಿ, ಮೈಸೂರಿನಲ್ಲೇ ಚಿತ್ರನಗರಿ ಸ್ಥಾಪನೆ ಮಾಡಲು ಮುಂದಾಗಬೇಕು ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. 


16 ಅರಮನೆಗಳು, 250ಕ್ಕೂ ಹೆಚ್ಚು ಲೋಕೇಶನ್ ಗಳು, ನದಿ, ನಾಳೆ, ಕಾಲುವೆ, ಬೆಟ್ಟ-ಗುಡ್ಡಗಳು ಚಿತ್ರೀಕರಣಕ್ಕೆ ಪ್ರಶಸ್ತವಾಗಿದೆ. ಅಲ್ಲದೆ, ಇದೀಗ ಮೈಸೂರಿನಲ್ಲಿ ವಿಮಾನ ನಿಲ್ದಾಣ ಸೌಲಭ್ಯವೂ ಇರುವುದರಿಂದ ಚಿತ್ರೀಕರಣಕ್ಕಾಗಿ ದೇಶ-ವಿದೇಶಗಳಿಂದ ಬರುವವರಿಗೆ ಅನುಕೂಲವಾಗಲಿದೆ. ಇದನ್ನೆಲಾ ಮನಗಂಡು ಹಿಂದಿನ ಕಾಂಗ್ರೆಸ್ ಸರ್ಕಾರ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ ನಿರ್ಣಯ ಕೈಗೊಂಡು ನೂರು ಎಕರೆ ಜಮೀನು ಮಂಜೂರು ಮಾಡಿತ್ತು. ಅಲ್ಲದೆ, ಬಜೆಟ್ ನಲ್ಲಿಯೂ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿತ್ತು. ಆದರೆ ಇದೀಗ ಇದನ್ನು ರಾಮನಗರಕ್ಕೆ ಸ್ಥಳಾಂತರಿಸಲು ಬಜೆಟ್'ನಲ್ಲಿ ಘೋಷಣೆ ಮಾಡಿರುವುದು ಸಮಂಜಸವಲ್ಲ ಎಂದು ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.


[[{"fid":"169718","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]]