ಸಿದ್ದರಾಮಯ್ಯನವರ ಆಡಳಿತಕ್ಕೂ ಅನುಭವಕ್ಕೂ ಬಹಳ ವ್ಯತ್ಯಾಸವಿದೆ: ಬಸವರಾಜ ಬೊಮ್ಮಾಯಿ
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿಂದು ಬಸವರಾಜ ಬೊಮ್ಮಾಯಿಯವರು ಬಿಜೆಪಿ ಕಾರ್ಯಕರ್ತರೊಡನೆ ಬಹಿರಂಗ ಪ್ರಚಾರ ಸಭೆ ನಡೆಸಿ ಮತದಾರರಲ್ಲಿ ಮತಯಾಚನೆ ಮಾಡಿದರು.
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತಕ್ಕೂ ಅವರ ಅನುಭವಕ್ಕೂ ಬಹಳ ವ್ಯತ್ಯಾಸವಿದೆ. ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ: ಪ್ರೇಕ್ಷಕರು ಅಪ್ಪಿದ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾಗೆ 25 ದಿನದ ಸಂಭ್ರಮ
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿಂದು ಬಸವರಾಜ ಬೊಮ್ಮಾಯಿಯವರು ಬಿಜೆಪಿ ಕಾರ್ಯಕರ್ತರೊಡನೆ ಬಹಿರಂಗ ಪ್ರಚಾರ ಸಭೆ ನಡೆಸಿ ಮತದಾರರಲ್ಲಿ ಮತಯಾಚನೆ ಮಾಡಿದರು.
ಕರ್ನಾಟಕದಲ್ಲಿ ಒಂದು ಸರ್ಕಾರವಿದೆ ಅಷ್ಟೇ. ಆದರೆ ಅವರ ಆಡಳಿತದ ಈ ಸರ್ಕಾರಕ್ಕೂ ಸಿದ್ದರಾಮಯ್ಯಗಿರುವ ಅನುಭವವೇ ಬೇರೆಯಾಗಿದೆ. ಈ ಸಿದ್ದರಾಮಣ್ಣನ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಇಲಾಖೆಯಲ್ಲಿಯೂ ಒಂದು ಸಣ್ಣ ಕೆಲಸವೂ ಕೂಡ ಆಗಿಲ್ಲ. ಗ್ರಾಮೀಣ ಅಭಿವೃದ್ಧಿಯಲ್ಲಿ ಕೆಲಸ ಆಗಿಲ್ಲ. ಜನರ ಕೆಲಸಗಳನ್ನು ಈ ಕಾಂಗ್ರೆಸ್ ಸರ್ಕಾರ ಮಾಡುತ್ತಿಲ್ಲ. ಯಾವುದೇ ಇಲಾಖೆಯಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದರು.
ಇನ್ನು ಗ್ಯಾರಂಟಿ ಯೋಜನೆಗಳಿಗೆ ಈ ಕಾಂಗ್ರೆಸ್ ಸರ್ಕಾರ ಸರಿಯಾದ ಹಣಕಾಸಿನ ವ್ಯವಸ್ಥೆ ಮಾಡಲೇ ಇಲ್ಲ. ಸರಿಯಾದ ವ್ಯವಸ್ಥೆ ಮಾಡದೆಯೇ ಕಾಂಗ್ರೆಸ್‌ನವರು ಗ್ಯಾರೆಂಟಿಗಳನ್ನು ಕೊಡುತ್ತೇವೆ ಎಂದರು. ಆದರೆ, ಇದ್ದ ಹಣಕಾಸಿಗೆ ಕೈ ಹಾಕಿ ಗ್ಯಾರಂಟಿ ಕೊಡುತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಖಜಾನೆಯಲ್ಲಿ ಒಂದೂ ನಯಾ ಪೈಸೆಯೂ ಉಳಿದಿಲ್ಲ. ಇವರ ಖಜಾನೆಯ ಬೊಕ್ಕಸ ಬರಿದಾಗಿದೆ ಎಂದರು.
ಎಸ್ ಸಿ ಎಸ್ ಟಿ ಸಮುದಾಯಗಳಿಗೆ ಮೀಸಲಿಟ್ಟಿದ್ದ 11300 ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ. ಎಸ್ ಸಿ, ಎಸ್ ಟಿ ಜನಾಂಗಗಳಿಗೆ ಸಾಲಸೌಲಭ್ಯ ಸಿಗುತ್ತಿಲ್ಲ, ಗಂಗಾ ಕಲ್ಯಾಣ ಬೋರ್ ಸಿಗುತ್ತಿಲ್ಲ. ಇನ್ನು ರೈತರ ಬಗ್ಗೆಯಂತೂ ಈ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಕಾಳಜಿಯೂ ಇಲ್ಲ. 10 ತಿಂಗಳಾದರೂ ರೈತರು ಒಂದು ಕಾಳನ್ನು ಕೂಡ ಬೆಳೆದಿಲ್ಲ. ಹಿಂದೆ ಬಿಜೆಪಿ ಸರ್ಕಾರದಲ್ಲಿ ತಾವು ಸಿಎಂ ಆಗಿದ್ದಾಗ, ಒಂದೇ ತಿಂಗಳಿನಲ್ಲಿ ರೈತರಿಗೆ ಬೆಳೆ ಪರಿಹಾರ ಕೊಟ್ಟಿದ್ದೆವು. 17 ಲಕ್ಷ ರೈತರಿಗೆ ಪರಿಹಾರ ಕೊಟ್ಟೆವು. ಆದರೆ, ರೈತರ ಕೆಲಸ ಮಾಡಲು ಈ ಕಾಂಗ್ರೆಸ್ ಸರ್ಕಾರಕ್ಕೆ ಮನಸಿಲ್ಲ. ಇವರಿಗೆ ಮನಸಿಲ್ಲದೆಯೇ ಸುಮ್ಮನೆ ಕೇಂದ್ರದ ಮೇಲೆ ಬೆರಳು ಮಾಡಿ ತೋರಿಸುತ್ತಿದ್ದಾರೆ ಅಷ್ಟೇ. ರೈತರನ್ನು ಉಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಆದರೆ, ಇವರೆಲ್ಲ ತಮ್ಮ ಹಾಗೂ ತಮ್ಮ ಸರ್ಕಾರದ ವೈಫಲ್ಯವನ್ನು ಮುಚ್ಚಿಕೊಳ್ಳು ಬರೀ ಭಾಷಣ ಮಾಡುತ್ತಿದ್ದಾರೆ. ಎಲ್ಲಾ ಜನಗಿರೂ ಸರಿಯಾದ ಗ್ಯಾರೆಂಟಿ ಮುಟ್ಟಿಲ್ಲ. ಗೃಹಲಕ್ಷ್ಮೀ ಯೋಜನೆಯ ಹಣ ಪ್ರಗತಿಯಲ್ಲಿದೆ ಎಂದು ಬರುತ್ತಲೇ ಇದೆ. ರಾಜ್ಯಕ್ಕೆ ಅಕ್ಕಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಿಂದ ಕೊಟ್ಟಿದ್ದಾರೆ ಎಂದರು.
ಕುರ್ಚಿ ಭದ್ರಪಡಿಸಿಕೊಳ್ಳು ಓಡಾಟ
ಈ ಸರ್ಕಾರದಲ್ಲಿ ಜನರ ಕೆಲಸ ಮಾಡಲು ಸಮಯವೇ ಇಲ್ಲ. ಆದರೆ, ಇವರು ಜನರಿಗೆ ಕೆಲಸ ಮಾಡುವುದಕ್ಕಿಂತ ತಮ್ಮತಮ್ಮ ಖುರ್ಚಿಯನ್ನು ಮಾತ್ರ ಭದ್ರಗೊಳಿಸಿಕೊಳ್ಳಲು ಓಡಾಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಕೆಲವು ಮಂತ್ರಿಗಳಿಗೆ ಲೋಕಸಭಾ ಚುನಾವಣೆ ನಿಲ್ಲಿ ಎಂದು ಹೇಳಿದ್ದಾರೆ. ಏಕೆಂದರೆ, ಇವು 5 ಗ್ಯಾರೆಂಟಿಗಳ ಜೊತೆ ಅಭ್ಯರ್ಥಿಗಳನ್ನು ಸೋಲಿಸುವ ಗ್ಯಾರೆಂಟಿಯೂ ಸಿದ್ದರಾಮಯ್ಯ ಸರ್ಕಾರದ್ದಾಗಿದೆ. ಮತ್ತೆ ಮೋದಿ ಪ್ರಧಾನಿಗಳಾಗಿ ಸರ್ಕಾರ ಬಂದ ತಕ್ಷಣ ಈ ಸರ್ಕಾರದ ದಿನಗಣನೆ ಪ್ರಾರಂಭವಾಗಲಿದೆ. ಇನ್ನು 6 ತಿಂಗಳು ಅಥವಾ 1 ವರ್ಷದೊಳಗೆ ಈ ಕರ್ನಾಟಕ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಬಂದೇ ಬರುತ್ತದೆ ಎಂದರು.
ಇದನ್ನೂ ಓದಿ: ಈ ಫೋಟೋದಲ್ಲಿರುವ ಕಂದಮ್ಮ ಸೌತ್ ಸಿನಿರಂಗದಲ್ಲಿ ಪ್ರೈವೇಟ್ ಜೆಟ್ ಹೊಂದಿರುವ ಏಕೈಕ ನಟಿ! ಬರೋಬ್ಬರಿ 183 ಕೋಟಿ ಆಸ್ತಿಯ ಯಜಮಾನಿ!
ಈ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಬರಗಾಲ ಗ್ಯಾರಂಟಿ, ಭ್ರಷ್ಟಾಚಾರ ಗ್ಯಾರೆಂಟಿ, ಜೀರೋ ಅಭಿವೃದ್ಧಿ ಗ್ಯಾರೆಂಟಿ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸಿಗೆ ಸೋಲು ಕೂಡ ಗ್ಯಾರೆಂಟಿ ಎಂದು ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ