ಸಿದ್ದರಾಮಯ್ಯ ಸರಕಾರವೋ ಹೈಕಮಾಂಡಿನ ಹಂಗಿನ ಸರಕಾರವೋ?- ಎಚ್ಡಿಕೆ ಟೀಕೆ

ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಬದಲಿಗೆ ಹೈಕಮಾಂಡಿನ ಹಂಗಿನ ಸರಕಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಬಗ್ಗೆ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಅವರು; ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.

Written by - Prashobh Devanahalli | Edited by - Manjunath N | Last Updated : Jun 13, 2023, 10:54 PM IST
  • ಸಿದ್ದರಾಮಯ್ಯ ಸರಕಾರವೋ ಹೈಕಮಾಂಡಿನ ಹಂಗಿನ ಸರಕಾರವೋ?
  • ಸರಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕೆ
  • ಹತ್ತನೇ ನಂಬರಿನ ಹಂಗಿನ ಸರಕಾರ ಎಂದು ಕುಟುಕಿದ ಮಾಜಿ ಸಿಎಂ
ಸಿದ್ದರಾಮಯ್ಯ ಸರಕಾರವೋ ಹೈಕಮಾಂಡಿನ ಹಂಗಿನ ಸರಕಾರವೋ?-  ಎಚ್ಡಿಕೆ ಟೀಕೆ title=

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಬದಲಿಗೆ ಹೈಕಮಾಂಡಿನ ಹಂಗಿನ ಸರಕಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಬಗ್ಗೆ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಅವರು; ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: "ಪಕ್ಷ ಕಟ್ಟಿ ಬೆಳೆಸಿದವರನ್ನು ಮೂಲೆಗುಂಪು ಮಾಡಿದ್ದು ಬಿಜೆಪಿ ಸರ್ಕಾರದ ಇಮೇಜ್ ಕುಸಿಯಲು ಕಾರಣ"

ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.ಅಲ್ಲದೆ, 'ಹತ್ತನೇ ನಂಬರಿನ ಹಂಗಿನ ಸರಕಾರ' ಎಂದು ಹ್ಯಾಷ್ ಟ್ಯಾಗ್ ಹಾಕಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ-ಕೆಟ್ಟ VFX, 500 ಕೋಟಿ ವೇಸ್ಟ್‌..! ʼಆದಿಪುರುಷ ಫಸ್ಟ್‌ ವಿಮರ್ಶೆ ಪೋಸ್ಟ್ ವೈರಲ್‌

ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.

ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News